ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಹಿನ್ನೆಲೆಯಲ್ಲಿ 19 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಧಾರವಾಡ, ಗದಗ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ರಾಯಚೂರು, ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಿಕ್ಕಮಗಳೂರು, ಕೋಲಾರ, ಮಂಡ್ಯ ಮತ್ತು ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಭಾಗದಲ್ಲಿ ಗಾಳಿಯ ವೇಗ ಗಂಟೆಗೆ 40-45 ಕಿ.ಮೀ. ಇರಲಿದ್ದು ಸಮುದ್ರದಲ್ಲಿ ಭಾರೀ ತೂಫಾನು ಉಂಟಾಗುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಈ ನಡುವೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಳೆ ನೀರು ನಿಂತು ಸಂಚಾರ ಸ್ಥಗಿತಗೊಂಡಿದೆ.
ಭಟ್ಕಳಕ್ಕೆ ಬರುವವರು ಅಥವಾ ಭಟ್ಕಳದಿಂದ ಬೇರೆಡೆ ಹೋಗುವವರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸದಂತೆ ಜಿಲ್ಲಾ ಆಡಳಿತ ಆದೇಶ ಹೊರಡಿಸಿದೆ.