
ಕುಮಟಾ: ತಾಲೂಕಿನ ಅಳಕೋಡ ಬಳಿ ಅಘನಾಶಿನಿ ನದಿಗೆ ಅಡ್ಡಲಾಗಿ ಕಿಂಡಿ ಅಣೆಕಟ್ಟು ನಿರ್ಮಿಸಲು ಉದ್ದೇಶಿಸಲಾಗಿದ್ದು ಈ ಕಾಮಗಾರಿ ಅವೈಜ್ಞಾನಿಕ ವಾಗಿದ್ದು ಕಾಮಗಾರಿಯ ಸ್ಥಳ ಬದಲಾಯಿಸಬೇಕು ಎಂದು ಗ್ರಾಮಸ್ಥರು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕಿಂಡಿ ಅಣೆಕಟ್ಟಿನ ಮೂಲಕ ಕುಡಿಯುವ ನೀರಿನ ಯೋಜನೆ ರೂಪಿಸಲಾಗಿದ್ದರು ಅಣೆಕಟ್ಟು ನಿರ್ಮಿಸುವ ಸ್ಥಳ ಅವೈಜ್ಞಾನಿಕ ವಾಗಿದೆ. ಇದರಿಂದಾಗಿ ಶಿರಗುಂಜಿ, ಉಪ್ಪಿನಪಟ್ಟಣ, ಮಲವಳ್ಳಿ , ಚಂಡೀಹಿತ್ತಲ ಗ್ರಾಮಗಳು ಮಳೆಗಾಲದಲ್ಲಿ ಜಲಾವೃತವಾಗಲಿವೆ. ನದಿ ಸಂಗಮದ ಪ್ರದೇಶದಲ್ಲಿ ಕಿಂಡಿ ಅಣೆಕಟ್ಟು ನಿರ್ಮಿಸುವುದರಿಂದ ಪ್ರವಾಹ ಸಂಭವವೂ ಹೆಚ್ಚುತ್ತದೆ. 500ಎಕರೆಗೂ ಹೆಚ್ಚು ಕೃಷಿ ಭೂಮಿ ಮುಳುಗಡೆಯಾಗಿ ರೈತರು ತೊಂದರೆಗೆ ಸಿಲುಕುವಂತಾಗುತ್ತದೆ ಅಲ್ಲದೇ ಸುತ್ತಮುತ್ತಲ ಪ್ರದೇಶದಲ್ಲಿ ಗುಡ್ಡ ಕುಸಿತದ ಸಂಭವವೂ ಇರುವುದರಿಂದ ಜನರು ಸಂಕಷ್ಟಕ್ಕೆ ಸಿಲುಕುವಂತಾಗುತ್ತದೆ. ಆದ್ದರಿಂದ ಕಿಂಡಿ ಅಣೆಕಟ್ಟು ನಿರ್ಮಿಸುವ ಸ್ಥಳ ಬದಲಾವಣೆ ಮಾಡಬೇಕು ಎಂದು ಗ್ರಾ.ಪಂ.ಅಧ್ಯಕ್ಷರು ಹಾಗೂ ಪಿಡಿಒ ಅವರಿಗೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ಊರಿನ ಹಲವು ಮುಖಂಡರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.