ಕಾರವಾರ: ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅರ್ಹ ಅಭ್ಯರ್ಥಿಗಳಿಗೆ ಪೂರ್ವ ಸಿದ್ಧತೆಗಾಗಿ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡಲು ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಆ.16ರವರೆಗೆ ವಿಸ್ತರಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಖುದ್ದಾಗಿ ಭೇಟಿ ನೀಡಿ ಅಥವಾ ನೊಂದಾಯಿತ ಅಂಚೆ ಮೂಲಕ ನಿಗದಿತ ಅವಧಿಯೊಳಗೆ ತಲುಪುವಂತೆ ರವಾನಿಸಬೇಕು. ಇಲಾಖೆಯ ವೆಬ್‌ಸೈಟ್: www.bcwd.karnataka.gov.in ನ್ನು ಸಂಪರ್ಕಿಸಿ ಅರ್ಜಿ ನಮೂನೆ ಹಾಗೂ ಅಧಿಸೂಚನೆಯನ್ನು ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಕಾರವಾರ ಕಚೇರಿ ದೂರವಾಣಿ ಸಂಖ್ಯೆ 08382-226589ಗೆ ಅಥವಾdobcmuttarakannada@gmail.com & dobcw-karwar@kar.gov.inನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.