
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹರಡದಂತೆ ಎಚ್ಚರ ವಹಿಸಬೇಕು. ಈ ನಿಟ್ಟಿನಲ್ಲಿ ಆಯಾ ಜಿಲ್ಲೆಗಳ ಜವಾಬ್ದಾರಿ ಜಿಲ್ಲಾಧಿಕಾರಿಗಳದ್ದೇ ಆಗಿದೆ. ಈ ಕಾರ್ಯಕ್ಕೆ ಪೆÇಲೀಸ್ ವರಿಷ್ಠಾಧಿಕಾರಿಗಳೂ ಕೈ ಜೋಡಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಸಂಬಂಧ ಇಂದು ಮಾತನಾಡಿರುವ ಅವರು, ಬೇರೆ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವ ಜನರನ್ನು ಕಡ್ಡಾಯವಾಗಿ ಪರೀಕ್ಷೆ ಮಾಡಬೇಕು. ಕೊರೋನಾ ನಿಯಂತ್ರಣ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಜೊತೆಗೂ ಮಾತುಕತೆ ನಡೆಸಲಾಗಿದ್ದು, ಮೂರನೇ ಅಲೆ ತಡೆಗೆ ಅಗತ್ಯ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿರುವುದಾಗಿ ಹೇಳಿದ್ದಾರೆ.
ಹಾಗೆಯೇ ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳ ಅಹವಾಲು ಸ್ವೀಕರಿಸಲಾಗುವುದು. ಸಂತ್ರಸ್ತರಿಗೆ ನೆರವು ನೀಡುವುದಕ್ಕೆ ಪೂರಕವಾಗಿ ಅಧಿಕಾರಿಗಳ ಜೊತೆಗೂ ಚರ್ಚಿಸುವುದಾಗಿ ಬೊಮ್ಮಾಯಿ ಭರವಸೆ ನೀಡಿದ್ದಾರೆ.