ಶಿರಸಿ: ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಅವರು ಕಾನಸೂರ ಕಾಳಿಕಾ ಭವಾನಿ ಪ್ರೌಢಶಾಲೆ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಮತ್ತು ನಾಣಿಕಟ್ಟಾ ಪ್ರೌಢಶಾಲೆಯ 8,9 ಮತ್ತು 10ನೇ ತರಗತಿಯ 385ವಿದ್ಯಾರ್ಥಿಗಳಿಗೆ ಪ್ರತಿವರ್ಷದಂತೆ ನೋಟ್‌ಬುಕ್ ಹಾಗೂ ಕ್ರೀಡಾ ಪರಿಕರ ವಿತರಿಸಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆ ಉತ್ತಮ ಸಂಸ್ಕಾರವನ್ನು ರೂಢಿಸಿಕೊಂಡು ಆದರ್ಶ ವ್ಯಕ್ತಿಗಳಾಗಿ ಸಮಾಜಕ್ಕೆ ಪ್ರೇರಣ ಶಕ್ತಿಯಾಗಿ ರೂಪಗೊಳ್ಳುವಂತೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ, ಅಖಿಲ ಕರ್ನಾಟಕ ಜನಜಾಗ್ರತಿ ವೇದಿಕೆ ಅಧ್ಯಕ್ಷರಾದ ಸುಭಾಸ ನಾಯ್ಕ್ ಮಾತನಾಡಿ ಮಕ್ಕಳು ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಜನೆಯೊಂದಿಗೆ ಒಳ್ಳೆಯ ಹವ್ಯಾಸ ರೂಢಿಸಿಕೊಂಡು ಆದರ್ಶ ವ್ಯಕಿಗಳಾಗಿ ತಮ್ಮಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಸಲಹೆ ನೀಡಿದರು.
ನಾನಿಕಟ್ಟಾ ಪ್ರೌಢಶಾಲೆಯಲ್ಲಿ 7 ವಿದ್ಯಾರ್ಥಿಗಳಿಗೆ ಶಿಷ್ಯವೇತನ, ಆರ್ಥಿಕ ತೊಂದರೆ ಉಂಟಾಗಿ ತೊಂದರೆಯಲ್ಲಿರುವ ಬಡಕುಟುಂಬಕ್ಕೆ ಆರ್ಥಿಕ ಸಹಕಾರ ನೀಡಿ ಸಹಕರಿಸಿದರು. ಕಾರ್ಯಕ್ರಮದಲ್ಲಿ ಶಿಕ್ಷಣ ಪ್ರೇಮಿ ಉಪೇಂದ್ರ ಪೈರವರಿಗೆ ಶಾಲಾ ಪಾಲಕರು, ಶಿಕ್ಷಕರು, ಊರ ನಾಗರಿಕರು, ಗೌರವ ಸನ್ಮಾನ ನೀಡಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಕಾಲೇಜು ಪ್ರಾಂಶುಪಾಲರು, ಸಹಶಿಕ್ಷಕರು, ಪಾಲಕರು, ವಿದ್ಯಾರ್ಥಿಗಳು ಹಾಗೂ ಉರನಾಗರಿಕರು ಉಪಸ್ಥಿತರಿದ್ದರು.