Slide
Slide
Slide
previous arrow
next arrow

ಹಂಪಿ ಕನ್ನಡ ವಿಶ್ವವಿದ್ಯಾಲಯದ ಮಾರ್ಗದರ್ಶಕರಾಗಿ ಡಾ. ಕೃಷ್ಣಮೂರ್ತಿ ಭಟ್ಟ

300x250 AD

ಶಿರಸಿ: ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಸಂಗೀತ ಮತ್ತು ನೃತ್ಯ ವಿಭಾಗದ ಬಾಹ್ಯ ಪಿ.ಎಚ್.ಡಿ. ಮಾರ್ಗದರ್ಶಕರನ್ನಾಗಿ ಡಾ. ಕೃಷ್ಣಮೂರ್ತಿ ಗಣಪತಿ ಭಟ್ಟ ಅವರನ್ನು ನಿಯುಕ್ತಿಗೊಳಿಸಲಾಗಿದೆ. ಹಂಪಿ ವಿಶ್ವ ವಿದ್ಯಾಲಯದ ಕುಲಪತಿಗಳು 2022-23ನೇ ಸಾಲಿಗೆ ಈ ಆದೇಶವನ್ನು ಹೊರಡಿಸಿದ್ದಾರೆ.

ಮೂಲತಃ ಯಲ್ಲಾಪುರ ತಾಲೂಕಿನ ಬೊಮ್ಮನಳ್ಳಿಯವರಾದ ಇವರು ಹೊನ್ನಾವರದ ಎಸ್.ಡಿ.ಎಂ. ಕಾಲೇಜಿನ ಸಂಗೀತ ವಿಭಾಗದ ಪ್ರಾಧ್ಯಾಪಕರಾಗಿ,ಸದ್ಯ ಶಿರಸಿಯ ಎಂ.ಎಂ.ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಸಂಗೀತ ಮತ್ತು ನೃತ್ಯ ವಿಭಾಗದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಖ್ಯಾತ ಗಾಯಕರೂ ಆದ ಶ್ರೀಯುತರ ಸಾಧನೆಗೆ ಕಾಲೇಜಿನ ಪ್ರಾಚಾರ್ಯರು, ಸಿಬ್ಬಂದಿ ವರ್ಗ, ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಸದಸ್ಯರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top