
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾರತೀಯ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ದಮನಿಸಲಾಗಿದೆ.
ನಾಗ್ಬೆರನ್- ಟಾರ್ಸರಾ ಪ್ರದೇಶದ ಅರಣ್ಯದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಮೇರೆಗೆ ಭಾರತೀಯ ಸೇನೆ ಈ ಕಾರ್ಯಾಚರಣೆ ನಡೆಸಿದೆ. ಈ ದಾಳಿಯ ಸಂದರ್ಭದಲ್ಲಿ ಸೇನಾಪಡೆಗಳತ್ತ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ ಎನ್‍ಕೌಂಟರ್ ನಡೆಸಿದ ಭಾರತೀಯ ಭದ್ರತಾ ಪಡೆಯ ಯೋಧರು, ಇಬ್ಬರು ಉಗ್ರಗಾಮಿಗಳನ್ನು ಯಮಪುರಿಗಟ್ಟಿರುವುದಾಗಿ ಮೂಲಗಳು ತಿಳಿಸಿವೆ. ಸ್ಥಳದಲ್ಲಿ ಮತ್ತಷ್ಟು ಉಗ್ರರಿರುವ ಶಂಕೆ ಇದ್ದು, ಶೋಧ ಕಾರ್ಯಾಚರಣೆ ಮುಂದುವರಿದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13