ಕಾರವಾರ: ತಾಲೂಕಿನ ದೇವಳಮಕ್ಕಿ ಗ್ರಾಮದಲ್ಲಿ ಬಾಪೂಜಿ ಗ್ರಾಮೀಣ ವಿಕಾಸ ಸಮಿತಿ ವತಿಯಿಂದ ನಡೆಯುತ್ತಿರುವ ಆದರ್ಶ ವಿದ್ಯಾಲಯ ಪ್ರೌಢಶಾಲೆ ಡಾರ್ವಿನ್ ಇಕೋ ಕ್ಲಬ್ ಮತ್ತು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಇತ್ತೀಚೆಗೆ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.
ದೇವಳಮಕ್ಕಿಯ ಅರಣ್ಯಾಧಿಕಾರಿ ಸುಭಾಷ ರಾಥೋಡ, ನಮ್ಮ ದೇಶದಲ್ಲಿನ ವನಮಹೋತ್ಸವದ ಮಹತ್ವದ ಕುರಿತು ಮಾತನಾಡಿದರು. ಗ್ರಾಮ ಪಂಚಾಯತ ಸದಸ್ಯ ಸಂತೋಷ ಗೌಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಅಭಿನಂದಿಸಿದರು. ಸಹ ಶಿಕ್ಷಕ ದೇವಪ್ಪ ಲಮಾಣಿರವರು ಸಂದರ್ಭನುಸಾರವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇಕೋ ಕ್ಲಬ್ ಸಂಚಾಲಕ ಮತ್ತು ವಿಜ್ಞಾನ ಶಿಕ್ಷಕ ಸಂತೋಷ ಕೆ.ನಾಯ್ಕ ವಹಿಸಿದ್ದರು.
ಕಾರ್ಯಕ್ರಮದ ಪ್ರಾರಂಭದಲ್ಲಿ 8ನೇ ತರಗತಿಯ ವಿದ್ಯಾರ್ಥಿಗಳಿಂದ ಸ್ವಾಗತ ಗೀತೆಯೊಂದಿಗೆ ಪ್ರಾರಂಭಿಸಿದರು. ಬಂದ ಅತಿಥಿಗಳಿಗೆ ವಿದ್ಯಾರ್ಥಿನಿ ದೀಕ್ಷಾ ಗೌಡ ಸ್ವಾಗತಿಸಿದರು. ಕೊನೆಯಲ್ಲಿ ವಿದ್ಯಾರ್ಥಿ ಪ್ರತಿನಿಧಿ ಪ್ರಥ್ವಿರಾಜ ಗುನಗಿ ಧನ್ಯವಾದವನ್ನು ಅರ್ಪಿಸಿದರು. ಈ ಕಾರ್ಯಕ್ರಮದ ಶ್ವೇತಾ ಮುರಕುಂಬಿ ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.