ಅಂಕೋಲಾ: ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಶನ್ ಹಾಗೂ ಬೆಂಗಳೂರು ಗ್ರಾಮಾಂತರ ಅಥ್ಲೆಟಿಕ್ಸ್ ಅಸೋಸಿಯೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆ.26, 27 ಮತ್ತು 28ರಂದು ಕರ್ನಾಟಕ ರಾಜ್ಯ ಕಿರಿಯರ ಹಾಗೂ ಹಿರಿಯರ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನ್ನು ನಡೆಸಲಾಗುವುದು.
ಈ ಚಾಂಪಿಯನ್‌ಶಿಪ್‌ನಲ್ಲಿ 14, 16, 18, 20, 23ರ ವಯಸ್ಸಿನೊಳಗಿನವರು ಮತ್ತು ಪುರುಷ, ಮಹಿಳೆಯರು ಭಾಗವಹಿಸಲು ಅವಕಾಶವಿರುತ್ತದೆ. ನೋಂದಣಿಗೆ ಆ.18 ಕೊನೆಯ ದಿನಾಂಕವಾಗಿದ್ದು ಜಿಲ್ಲೆಯ ಆಸಕ್ತ ಕ್ರೀಡಾಪಟುಗಳು ತಮ್ಮ ಸಂಪೂರ್ಣ ಮಾಹಿತಿಯೊಂದಿಗೆ ಉತ್ತರ ಕನ್ನಡ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ (ರಿ), ಕಾರವಾರ ಇದರ ಕಾರ್ಯದರ್ಶಿಗಳಾದ ಕೆ.ಆರ್.ನಾಯಕ ಬೇಲೇಕೇರಿ ಮೊ.ನಂ.: 98458 46351 ಅವರನ್ನು ಸಂಪರ್ಕಿಸಲು ಜಿಲ್ಲಾ ಸಂಸ್ಥೆಯ ಅಧ್ಯಕ್ಷ ಸದಾನಂದ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ನೋಂದಣಿಗೆ ಆಹ್ವಾನ
