Slide
Slide
Slide
previous arrow
next arrow

ಆಟೋ ನಿಲ್ದಾಣದ ಪುನರ್ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

300x250 AD

ದಾಂಡೇಲಿ: ನಗರದ ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಎವರ್ ಗ್ರೀನ್ ಆಟೋ ನಿಲ್ದಾಣದ ಪುನರ್ ನಿರ್ಮಾಣ ಮಾಡುವ ನಿಟ್ಟಿನಲ್ಲಿ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆ ಮುಂದಾಗಿದ್ದು, ಈ ಹಿನ್ನಲೆಯಲ್ಲಿ ವೆಸ್ಟ್ ಕೊಸ್ಟ್ ಕಾಗದ ಕಾರ್ಖಾನೆಯು ತನ್ನ ಸಿಎಸ್‌ಆರ್ ಯೋಜನೆಯ ಮೂಲಕ ಆಟೋ ನಿಲ್ದಾಣವನ್ನು ನಿರ್ಮಿಸಿಕೊಡುವ ಉದ್ದೇಶದಿಂದ ಸ್ಥಳ ಪರಿಶೀಲನಾ ಕಾರ್ಯವನ್ನು ಮಂಗಳವಾರ ನಡೆಸಲಾಯಿತು.
ವೆಸ್ಟ್ಕೋಸ್ಟ್ ಕಾಗದ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ ತಿವಾರಿ, ಕಾರ್ಖಾನೆಯ ಸಿವಿಲ್ ವಿಭಾಗದ ಡಿ.ಜಿ.ಎಂ ಸಂಜಯ್ ಹುಕ್ಕೇರಿಕರ, ಸಿವಿಲ್ ವಿಭಾಗದ ಅಭಿಯಂತರ ಮಹಮ್ಮದ್ ಅಜಾರುದ್ದೀನ್ ದೇಸೂರು ಭೇಟಿ ನೀಡಿ ಪರಿಶೀಲನೆ ನಡೆಸಿ, ಆಟೋ ಚಾಲಕರ ಜೊತೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ನಗರ ಸಭಾ ಸದಸ್ಯರಾದ ಮೋಹನ ಹಲವಾಯಿ, ಆಟೋ ಚಾಲಕರ ಸಂಘದ ಅಧ್ಯಕ್ಷ ಬಾಬಾಸಾಬ ಜಮಾದಾರ ಸೇರಿದಂತೆ ಆಟೋ ಚಾಲಕರು ಇದ್ದರು.

300x250 AD
Share This
300x250 AD
300x250 AD
300x250 AD
Back to top