ದಾಂಡೇಲಿ: ನಗರ ಸ್ಥಳಿಯ ಸಂಸ್ಥೆಗಳು ಹಾಗೂ ಪಂಚಾಯತರಾಜ್ ಸಂಸ್ಥೆಗಳಲ್ಲಿ ಅನುಸೂಚಿತ ಉದ್ಯೋಗದಡಿಯಲ್ಲಿ ಸೇವೆ ಸಲ್ಲಿಸುವ ಕಾರ್ಮಿಕರಿಗೆ ವೇತನ ನಿಗದಿ ಮಾಡಿ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಅವೈಜ್ಞಾನಿಕವಾಗಿದೆ. ಪೌರಕಾರ್ಮಿಕರ ಬೇಡಿಕೆ ಈಡೇರಿಕೆಯಾಗಿಲ್ಲ, ಈ ನಿಟ್ಟಿನಲ್ಲಿ ರಾಜ್ಯ ಸರಕಾರವೂ ಪ್ರಾಣದ ಹಂಗು ತೊರೆದು ಸೇವೆ ಸಲ್ಲಿಸುವ ಪೌರಕಾರ್ಮಿಕರ ನ್ಯಾಯೋಚಿತವಾದ ಬೇಡಿಕೆಯನ್ನು ಈಡೇರಿಸುವಂತೆ ಪೌರಕಾರ್ಮಿಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಮಾಂಜನೇಯ ಅವರು ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ.
ಪೌರಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹ
