ಶಿರಸಿ: ನಗರದ ಎಂ.ಎಂ.ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ಇತಿಹಾಸ ವಿಭಾಗದಿಂದ ಆಯೋಜಿಸಲಾಗಿದ್ದ ಶೈಕ್ಷಣಿಕ ಪ್ರವಾಸದಲ್ಲಿ ವಿದ್ಯಾರ್ಥಿಗಳು ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹಲ್ಮಿಡಿ ಗ್ರಾಮಕ್ಕೆ ತೆರಳಿ ಕನ್ನಡದ ಮೊದಲ ಶಾಸನವಾದ ಹಲ್ಮಿಡಿ ಶಾಸನದ ಐತಿಹಾಸಿಕ ಪರಂಪರೆಯನ್ನು ಉಳಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ನಂತರ ಹಲ್ಮಿಡಿ ಶಾಸನದ ಸುತ್ತ ಮುತ್ತ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಿದರು. ಹಲ್ಮಿಡಿ ಶಾಸನದ ಹುಟ್ಟು ಹಾಗೂ ಹಳೆಯ ಶಾಸನ ಹಾಗೂ ಕಲೆ ಮುಂದಿನ ಪೀಳಿಗೆಯವರಿಗೂ ಉಳಿಯುವಂತೆ ಆಗಬೇಕು ಎಂದು ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮಸ್ಥರಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಊರ ಜನರು, ಎಂ ಎಂ ಕಲಾ ಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಹಾಗೂ ಇತಿಹಾಸ ಶಿಕ್ಷಕಿ ಪ್ರೀತಿ ಭಂಡಾರಿ ಉಪಸ್ಥಿತರಿದ್ದರು..