Slide
Slide
Slide
previous arrow
next arrow

ಆ.17ಕ್ಕೆ ಸಿದ್ದಾಪುರದಲ್ಲಿ ಲೋಕಾಯುಕ್ತ ಅಹವಾಲು ಸ್ವೀಕಾರ

300x250 AD

ಕಾರವಾರ: ಜಿಲ್ಲಾ ಲೋಕಾಯುಕ್ತ ಕಛೇರಿಯ ಅಧಿಕಾರಿಗಳು ಸಿದ್ದಾಪುರ ತಾಲೂಕು ಕೇಂದ್ರಕ್ಕೆ ಭೇಟಿ ನೀಡಲಿದ್ದು, ಸಾರ್ವಜನಿಕರಿಂದ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ಭರ್ತಿಮಾಡಿದ ದೂರು ಅರ್ಜಿಗಳನ್ನು ಸ್ವೀಕಾರ ಹಾಗೂ ವಿಚಾರಣೆ ಮಾಡುವರು. ಆ.17ರ ಬೆಳಿಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಿದ್ದಾಪುರ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲನ್ನು ಮತ್ತು ಅರ್ಜಿಗಳನ್ನು ಸ್ವೀಕರಿಸುತ್ತಾರೆ.
ಈ ಸಂಬಂಧ ತಾಲೂಕಿನ ಯಾವುದೇ ಸರ್ಕಾರಿ ಕಾರ್ಯಾಲಯದಲ್ಲಿ ಸಾರ್ವಜನಿಕರಿಗೆ ಕೆಲಸ ಮಾಡಿ ಕೊಡುವಲ್ಲಿ ಅನಾವಶ್ಯಕ ವಿಳಂಬ ಅಥವಾ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಮೂನೆ 1 & 2ರಲ್ಲಿ ಭರ್ತಿ ಮಾಡಿ ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08382-295293ಗೆ ಸಂಪರ್ಕಿಸಬಹುದೆಂದು ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top