Slide
Slide
Slide
previous arrow
next arrow

ಹರ್ ಘರ್ ತಿರಂಗಾ: ಪ್ರತಿ ಮನೆಯಲ್ಲೂ ಧ್ವಜ ಹಾರಿಸಲು ಕರೆ

300x250 AD

ಜೊಯಿಡಾ: ತಾಲೂಕಿನ ಉಳವಿಯಲ್ಲಿ ಹರ್ ಘರ್ ತಿರಂಗಾ ಅನುಷ್ಠಾನದ ಕುರಿತು 75ನೇ ಸ್ವಾತಂತ್ರ‍್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಸರ್ಕಾರದ ಸುತ್ತೋಲೆಯಂತೆ ಕ್ರಮ ಕೈಗೊಳಲು ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಆನಂದ ಬಡಕುಂದ್ರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸ್ವಾತಂತ್ರ‍್ಯ ದಿನದಂದು ಸರ್ಕಾರದ ಆದೇಶದ ಪ್ರಕಾರ ಪ್ರತಿಯೊಂದು ಮನೆಯಲ್ಲಿಯೂ ನಮ್ಮ ದೇಶದ ಭಾವುಟ ಹಾರಾಡಬೇಕು. ಈ ಬಗ್ಗೆ ಎಲ್ಲಾ ಗ್ರಾಮ ಪಂಚಾಯತಿಗಳಿಗೂ ಮಾಹಿತಿ ಕಳುಹಿಸಲಾಗಿದೆ. ನಾವೆಲ್ಲರೂ ಅದ್ಧೂರಿಯಿಂದ ಸ್ವಾತಂತ್ರ‍್ಯ ದಿನವನ್ನು ಆಚರಿಸೋಣ ಎಂದರು. ಕೆಲ ಹಳ್ಳಿಗಳಿಂದ ಬಂದ ಸಾರ್ವಜನಿಕರಿಗೆ ಇದೇ ವೇಳೆ ಭಾವುಟವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಅಮೃತ ಮಹೋತ್ಸವ ಯೋಜನೆಯಡಿ ದತ್ತುಗ್ರಾಮಗಳ ಸಮೀಕ್ಷೆ ಕುರಿತು ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ವಿನೋದ ಅಣ್ವೇಕರ, ಉಳವಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜುಳಾ ಮಿರಾಶಿ, ಉಪಾಧ್ಯಕ್ಷ ಮಂಜುನಾಥ ಮೋಕಾಶಿ ಹಾಗೂ ಎಲ್ಲಾ ಗ್ರಾಮ ಪಂಚಾಯತಿಗಳ ಸದಸ್ಯರು, ಅಭಿವೃದ್ಧಿ ಅಧಿಕಾರಿ ಮಹಮ್ಮದ್ ಹನೀಫ್ ಸೇರಿದಂತೆ ಇತರರು ಇದ್ದರು.

300x250 AD
Share This
300x250 AD
300x250 AD
300x250 AD
Back to top