ದಾಂಡೇಲಿ: ನಗರದ ಹಿರಿಯ ಕಾಂಗ್ರೆಸ್ ಮುಖಂಡರು, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಹಳೆದಾಂಡೇಲಿಯ ನಿವಾಸಿ ಎಂ.ಆರ್.ನಾಯ್ಕ ಅವರು ಬುಧವಾರ ಸಂಜೆ ವಿಧಿವಶರಾದರು. ಮೃತರಿಗೆ 86 ವರ್ಷ ವಯಸ್ಸಾಗಿತ್ತು.
50 ವರ್ಷಗಳಿಗಿಂತಲೂ ಹೆಚ್ಚು ಕಾಲ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಎಂ.ಆರ್.ನಾಯ್ಕ ಅವರು ನೇರ ನಡೆ ನುಡಿಯ ರಾಜಕಾರಣಿಯಾಗಿ ಗಮನ ಸೆಳೆದಿದ್ದರು. ಆಶ್ರಯ ಸಮಿತಿಯ ಕರ‍್ಯದರ್ಶಿಯಾಗಿ ಸೇವೆ ಸಲ್ಲಿಸಿರುವ ಎಂ.ಆರ್.ನಾಯ್ಕ ಅವರು ಕೋಮಾರಪಂತ ಸಮಾಜದ ಅಧ್ಯಕ್ಷರಾಗಿ ಹೀಗೆ ವಿವಿಧ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತಾವು ತೊಡಗಿಕೊಂಡಿದ್ದರು. ಸಾಮಾಜಿಕ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದ ಎಂ.ಆರ್.ನಾಯ್ಕ ಅವರು ಪತ್ನಿ, ಮೂವರು ಗಂಡು ಮಕ್ಕಳು ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ನಗರದ ಗಣ್ಯರನೇಕರು ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.
ಹಿರಿಯ ಕಾಂಗ್ರೆಸ್ ಮುಖಂಡ ಎಂ.ಆರ್.ನಾಯ್ಕ ವಿಧಿವಶ
