Slide
Slide
Slide
previous arrow
next arrow

1 ಕೋಟಿ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸುವ ಗುರಿ: ಅಶ್ವತ್ಥನಾರಾಯಣ

300x250 AD

ಮೈಸೂರು :  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆಯೋಜಿಸಲಾಗಿದ್ದ ಯುವಜನ ಮಹೋತ್ಸವ ಅತ್ಯದ್ಭುತ ಯಶಸ್ಸನ್ನು ಕಂಡಿತು. ಮೈಸೂರು ವಿಶ್ವವಿದ್ಯಾಲಯದಿಂದ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ 35 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿಯಾಗಿದ್ದು, ಗಾಯನ ಹಾಗೂ ನೃತ್ಯ ಕಾರ್ಯಕ್ರಮಗಳು ಪ್ರೇಕ್ಷಕರ ಗಮನಸೆಳೆಯಿತು.

ರಾಕಿಂಗ್‌ ಸ್ಟಾರ್‌ ಯಶ್‌ ಆಗಮನ ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಿತ್ತು. ಯುವಶಕ್ತಿಯನ್ನು ಸದ್ಬಳಕೆ ಮಾಡಿಕೊಂಡು 25 ವರ್ಷದಲ್ಲಿ ದೇಶ ಸಮಗ್ರ ಅಭಿವೃದ್ಧಿ ಕಾಣಲು ಬಿಜೆಪಿ ಸರಕಾರ ಪಣ ತೊಟಿದ್ದು, ನವ ಭಾರತ ನಿರ್ಮಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿ ಆವರಣದಲ್ಲಿ ಆರಂಭಿಸಲಾಗಿರುವ ಸ್ಕೂಲ್‌ ಆಫ್‌ ಎಂಜಿನಿಯರಿಂಗ್‌ ಕಾಲೇಜಿನ ತಂತ್ರಜ್ಞಾನ ಭವನ, ವಿಶ್ವವಿದ್ಯಾಲಯದ ಫಾರ್ಮಸಿ ಕಾಲೇಜು ಕಟ್ಟಡ ಸಹಿತ ವಿವಿಧ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮಾಡಿದರು.

“ಮಹಾರಾಜರ ಆಳ್ವಿಕೆಯ ಕಾಲದಲ್ಲಿ ದೇಶಕ್ಕೇ ಮಾದರಿ ಆಡಳಿತ ನೀಡಿದ್ದ ನಮ್ಮ ಮೈಸೂರನ್ನು ವಿಶ್ವವೇ ತಿರುಗಿ ನೋಡುವ ರೀತಿಯಲ್ಲಿ ಅಭಿವೃದ್ಧಿಪಡಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಬಹುಮುಖ್ಯವಾಗಿ ಪ್ರವಾಸೋಧ್ಯಮ ಕ್ಷೇತ್ರಕ್ಕೆ ಉತ್ತೇಜನ ನೀಡುವ ದಿಶೆಯಲ್ಲಿ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೇರಿಸುವ ಜತೆ ಉದ್ಯೋಗ ಸೃಷ್ಟಿಯ ನಗರವನ್ನಾಗಿ ಪರಿವರ್ತಿಸಲಾಗುತ್ತಿದೆ”. ಎಂದು ಮುಖ್ಯಮಂತ್ರಿಗಳು ಹೇಳಿದರು.

“ನಮ್ಮ ಮೈಸೂರಿನ ಶೈಕ್ಷಣಿಕ ಕೇಂದ್ರಗಳನ್ನು ಅಭಿವೃದ್ಧಿಪಡಿಸುವ ದಿಶೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಪ್ರತಿಷ್ಠಿತ ಮಹಾರಾಣಿ ಹಾಗೂ ಮಹಾರಾಜ ಕಾಲೇಜುಗಳ ಅಭಿವೃದ್ಧಿಯ ಜತೆ ಹಾಸ್ಟೇಲ್‌ಗಳ ನಿರ್ಮಿಸುವ ಮೂಲಕ ಹಿಂದಿನ ವೈಭವವನ್ನು ಮರುಕಳಿಸುವಂತೆ ಮಾಡುವ ಉದ್ದೇಶ ಹೊಂದಲಾಗಿದೆ.” ಎಂದು ಈ ಸಂದರ್ಭದಲ್ಲಿ ನುಡಿದಿದ್ದಾರೆ.

300x250 AD

ಸಚಿವರಾದ ಅಶ್ವತ್ಥನಾರಾಯಣ ಅವರು ಮಾತನಾಡಿ “ದೇಶದ ಮೊಟ್ಟ ಮೊದಲ ಅತ್ಯಾಧುನಿಕ ಸೆಮಿಕಂಡಕ್ಟರ್ ಪ್ಲಾಂಟ್ ಸಹ ನಮ್ಮ ಮೈಸೂರಿನಲ್ಲಿ ಆರಂಭವಾಗಲಿದ್ದು 3 ಲಕ್ಷ ಕೋಟಿ ವಹಿವಾಟಿನ ಗುರಿ ಹೊಂದಲಾಗಿದೆ. ಮುಂಬರುವ ದಿನಗಳಲ್ಲಿ ಔದ್ಯಮಿಕ ವಲಯದಲ್ಲಿ ಮಹತ್ತರ ಬದಲಾವಣೆಯನ್ನು ಕಾಣಲಿದೆ.” ಎಂಬ ಭರವಸೆ ನೀಡಿದರು.

“ಯುವ ಜನತೆಗೆ ಕೌಶಲ್ಯಯುಕ್ತ ಶಿಕ್ಷಣ ನೀಡುವ ಜತೆ ಸರ್ವರಿಗೂ ಉದ್ಯೋಗ ನೀಡುವ ಮೂಲಕ ಯುವಜನತೆಗೆ ಉತ್ತಮ ಭವಿಷ್ಯ ನೀಡುವ ಕೆಲಸದಲ್ಲಿ ನಮ್ಮ ಸರ್ಕಾರ ನಿರತವಾಗಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸುವ ಮೂಲಕ ದೇಶ ಪ್ರೇಮವನ್ನು ಅಭಿವ್ಯಕ್ತ ಪಡಿಸಲು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಕರೆ ನೀಡಿದ್ದಾರೆ. ಈ ದಿಶೆಯಲ್ಲಿ 1 ಕೋಟಿ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸುವ ಗುರಿ ಹೊಂದಲಾಗಿದೆ.” ಎಂದು ಹೇಳಿದರು.

ಕಾರ್ಯಕ್ರಮಕ್ಕೆ ಆಗಮಿಸಿದ್ದ ರಾಕಿಂಗ್‌ ಸ್ಟಾರ್‌ ಯಶ್‌ ಮಾತನಾಡಿ “ಒಂದು ಸಣ್ಣ ಬದಲಾವಣೆಯೂ ಮನುಷ್ಯನಲ್ಲಿ ಬದಲಾವಣೆಯನ್ನು ತರುತ್ತದೆ. ಪ್ರತಿಯೊಬ್ಬರೂ ಸರ್ಕಾರದ ಯೋಜನೆಗಳ ಬಗ್ಗೆ ತಿಳಿದುಕೊಂಡು ಅದರ ಸದುಪಯೋಗ ಪಡೆದುಕೊಳ್ಳಬೇಕು.” ಎಂದು ಹೇಳಿದರು. ಸಚಿವ ಅಶ್ವತ್ಥನಾರಾಯಣ ಅವರು ನನ್ನ ಜತೆ ಮಾತನಾಡುವಾಗ ಪಾಲಿಸಿಗಳ ಬಗ್ಗೆ, ಎಜುಕೇಷನ್‌ ರಿಫಾರ್ಮ್ಸ್‌ ಬಗ್ಗೆ ಮಾತನಾಡುತ್ತಿರುತ್ತಾರೆ. ಅದನ್ನು ಜಾರಿಗೆ ತರುವ ಕೆಲಸವನ್ನೂ ಮಾಡುತ್ತಿದ್ದಾರೆ. ಅವರಿಗೆ ಶುಭ ಹಾರೈಕೆಗಳು.” ಎಂದರು.

ಕಾರ್ಯಕ್ರಮದಲ್ಲಿ ಸಂಸದ ಪ್ರತಾಪಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ನಿರಂಜನ್ ಎಲ್.ನಾಗೇಂದ್ರ, ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಮೇಯರ್ ಸುನಂದ ಪಾಲನೇತ್ರ, ಡಿಸಿ ಡಾ.ಬಗಾದಿ ಗೌತಮ್, ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಕುಲಸಚಿವ ಪ್ರೊ. ಆರ್.ಶಿವಪ್ಪ, ಪರೀಕ್ಷಾಂಗ ಕುಲಸಚಿವ ಪ್ರೊ.ಎ.ಪಿ.ಜ್ಞಾನಪ್ರಕಾಶ್, ಹಣಕಾಸು ಅಧಿಕಾರಿ‌ ಸಂಗೀತ ಭಟ್, ಸಿಂಡಿಕೇಟ್ ಸದಸ್ಯರಾದ ಡಾ.ಈ.ಸಿ.ನಿಂಗರಾಜು, ಡಾ.ಚೈತ್ರ ಸೇರಿದಂತೆ ಇತರರು ಇದ್ದರು.

Share This
300x250 AD
300x250 AD
300x250 AD
Back to top