
ಕಾರವಾರ: ಇಲ್ಲಿನ ಜಿಲ್ಲಾ ಪತ್ರಿಕಾ ಭವನ ನಿರ್ವಹಣಾ ಸಮಿತಿಯಿಂದ ಸಿದ್ದರದಲ್ಲಿ ಇಂದು (ಆ.1) ಪತ್ರಿಕಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.
ತಾಲೂಕಿನ ಸಿದ್ದರದ ನರಸಿಂಹ ದೇವಸ್ಥಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ, ಕಾರವಾರ ಉಪವಿಭಾಗಾಧಿಕಾರಿ ವಿದ್ಯಾಶ್ರೀ ಚಂದರಗಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಅತಿಥಿಗಳು, ಪತ್ರಕರ್ತರು ಹಾಗೂ ಗ್ರಾಮಸ್ಥರಿಂದ ದೇವಸ್ಥಾನದ ಸಮೀಪದ ಗದ್ದೆಯಲ್ಲಿ ನಾಟಿ ಕಾರ್ಯ ನಡೆಯಲಿದೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.
ವಿಜಯ ಕರ್ನಾಟಕ ಶಿವಮೊಗ್ಗ ಸ್ಥಾನಿಕ ಸಂಪಾದಕ ವಿವೇಕ ಮಹಾಲೆ, ದಿಗ್ವಿಜಯ ಸುದ್ದಿ ವಾಹಿನಿಯ ಜಿಲ್ಲಾ ವರದಿಗಾರ ಶೇಷಗಿರಿ ಮುಂಡಳ್ಳಿ ಹಾಗೂ ಪ್ರಜಾವಾಣಿ ಜಿಲ್ಲಾ ವರದಿಗಾರ ಸದಾಶಿವ ಎಂ.ಎಸ್. ಅವರಿಗೆ ಜಿಲ್ಲಾ ಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದ ಈ ಸಾಲಿನ ಟ್ಯಾಗೋರ್ ಪತ್ರಿಕಾ ಪ್ರಶಸ್ತಿಯನ್ನೂ ಇದೇ ವೇಳೆ ಪ್ರದಾನ ಮಾಡಲಾಗುತ್ತದೆ.