ಕಾರವಾರ: ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್‌ನಲ್ಲಿ ಜಿಲ್ಲೆಯ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳಲ್ಲಿ ಕಲಿಯುತ್ತಿರುವ ಮತೀಯ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರೀಶ್ಚಿಯನ್, ಜೈನ್, ಬೌದ್ಧ, ಪಾರ್ಸಿ, ಸಿಖ್) ಮೆಟ್ರಿಕ್ ಪೂರ್ವ (1ರಿಂದ 10ನೇ ತರಗತಿ), ಮೆಟ್ರಿಕ್ ನಂತರದ (ಪಿ.ಯು.ಸಿ ಯಿಂದ ಪಿ.ಹೆಚ್.ಡಿ ವರೆಗಿನ) ಹಾಗೂ ಮೆರಿಟ್-ಕಂ-ಮೀನ್ಸ್ (ತಾಂತ್ರಿಕ ವೃತ್ತಿಪರ ಕೋರ್ಸ್ಗಳಿಗೆ) ವಿದ್ಯಾರ್ಥಿಗಳಿಗೆ 2022-23ನೇ ಸಾಲಿಗೆ ವಿದ್ಯಾರ್ಥಿವೇತನಕ್ಕೆ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮೆಟ್ರಿಕ್ ಪೂರ್ವ ಸೆ.30 ಹಾಗೂ ಮೆಟ್ರಿಕ್ ನಂತರದ, ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಅ.31 ಕೊನೆಯ ದಿನವಾಗಿದೆ. ಎನ್‌ಎಸ್‌ಪಿಯಲ್ಲಿ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ ಇಲ್ಲವಾದಲ್ಲಿ ಎಸ್‌ಎಸ್‌ಪಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ. ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ 50%ಗಿಂತ ಹೆಚ್ಚಿನ ಅಂಕ ಗಳಿಸಿರಬೇಕು, ಹಾಗೂ ಕರೆಸ್ಪಾಂಡೆನ್ಸ್ ಶಿಕ್ಷಣ, ಸರ್ಟಿಫಿಕೇಟ್ ಕೋರ್ಸ್, ತರಬೇತಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಂತಿಲ್ಲ.
https://scholarships.gov.in/ನಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ನಂತರ ಆನ್‌ಲೈನ್ ಪ್ರತಿಯೊಂದಿಗೆ ಅವಶ್ಯ ದಾಖಲೆಯನ್ನೊಳಗೊಂಡ ಒಂದು (ಸೆಟ್) ಪ್ರತಿಯನ್ನು ತಯಾರಿಸಿ ಓದುತ್ತಿರುವ ಶಾಲೆಯ ಮುಖ್ಯೋಪಾಧ್ಯಾಯರಿಗೆ ಸಲ್ಲಿಸುವುದು. ಮೆಟ್ರಿಕ್ ನಂತರದ ಮತ್ತು ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ನಂತರ ಆನ್‌ಲೈನ್ ಪ್ರತಿಯೊಂದಿಗೆ ಅವಶ್ಯ ದಾಖಲೆಯನ್ನೊಳಗೊಂಡ ಒಂದು (ಸೆಟ್) ಪ್ರತಿಯನ್ನು ತಯಾರಿಸಿ ವಿದ್ಯಾರ್ಥಿಗಳು ಓದುತ್ತಿರುವ ಕಾಲೇಜಿಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೆಬ್‌ಸೈಟ್ https://dom.karnataka.gov.in/ ಅಥವಾ ಟ್ವಿಟರ್ ಐಡಿ: @WelfareUttaraಅಥವಾ ಆಯಾ ತಾಲೂಕಿನ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರ ಅಥವಾ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಉತ್ತರ ಕನ್ನಡ, ಕಾರವಾರ ದೂರವಾಣಿ ಸಂಖ್ಯೆ: 08382-220336/ ಅಥವಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಹಾಯವಾಣಿ 8277799990ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.