ಶಿರಸಿ: ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ, ಸೋಂದಾ ಇದರ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯಲ್ಲಿಆಜಾದಿ ಕಾ ಅಮೃತ ಮಹೋತ್ಸವವನ್ನುಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಮೇಜರ್ ರಘುನಂದನ್ ಹೆಗಡೆ ಅವರು ಧ್ವಜಾರೋಹಣ ನಡೆಸಿ ಶಾಲಾ ವಿದ್ಯಾರ್ಥಿಗಳಿಂದ ವಂದನೆ ಸ್ವೀಕರಿಸಿದರು.
ನಂತರ ದೀಪ ಬೆಳಗಿಸುವುದರ ಮೂಲಕ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮೇಜರ್ ರಘುನಂದನ್ ಮಾತನಾಡಿ ಸ್ವಾತಂತ್ರ್ಯ ಉಳಿಸಿ ದೇಶದ ಗೌರವ ಹೆಚ್ಚಿಸುವುದು ನಮ್ಮ ಜವಾಬ್ದಾರಿ ಎಂದರು.ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆಯ ಕಾರ್ಯದರ್ಶಿಗಳಾದ ಶಿವರಾಮ ಭಟ್‌ಅವರು ಮಾತನಾಡಿ ನಾವು ದೇಶವನ್ನು ಪ್ರೀತಿಸುವ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಪ್ರಾಚಾರ್ಯರಾದ ವಸಂತ ಭಟ್ ಮಾತನಾಡಿ ದೇಶದ ಹಿರಿಮೆ ಗರಿಮೆಗಳನ್ನು ಉಳಿಸಿ ಬೆಳೆಸುವ ಆದರ್ಶ ನಾಗರಿಕರು ನೀವಾಗಬೇಕೆಂದು ಮಕ್ಕಳಿಗೆ ತಿಳಿಹೇಳಿದರು.ನಂತರ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.ಇದೇ ಸಂದರ್ಭದಲ್ಲಿ ಶಾಲೆಯಲ್ಲಿಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯರ್ಥಿಗಳಿಗೆ ಪಾರಿತೋಷಕ ವಿತರಿಸಲಾಯಿತು.ಇದೇ ಶುಭ ಸಂದರ್ಭದಲ್ಲಿ ಸಂಸ್ಥೆಯ ಹಳೆಯ ವಿದ್ಯಾರ್ಥಿಗಳಾದ ಕುಮಾರ್ ಸಂಜಿತ್ ಪಂಡಿತ್ ಹಾಗು ಕುಮಾರಿ ವಿಜೇತಾ ಭಟ್‌ಇವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ತೋರಿದ ಅದ್ವಿತೀಯ ಸಾಧನೆಗಾಗಿ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಲಾಯಿತು. ಹತ್ತನೇ ತರಗತಿಯ ವಿದ್ಯಾರ್ಥಿಯಾದ ಕುಮಾರ್ ಸುಜನ್ ಹೆಗಡೆ ಸ್ವಾಗತಿಸಿ, ಕುಮಾರಿ ಅರ್ಚಿತಾ ಜಿ.ಎಸ್. ನಿರೂಪಿಸಿ, ಕುಮಾರಿ ದಿಯಾ ಯು. ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.