ಸಿದ್ಧಾಪುರ: ತಾಲೂಕಿನ ನೆಲೆಮಾವು ಶಾಲೆಯಲ್ಲಿ 75 ನೇ ಸ್ವಾತಂತ್ರೋತ್ಸವ ದಿನವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. S D M C. ಸದಸ್ಯರು ಗ್ರಾಮ ಪಂಚಾಯತ್ ಪ್ರತಿನಿಧಿಗಳು ಊರಿನ ಅನೇಕ ನಾಗರಿಕರು ಧ್ವಜಾರೋಹಣ ಸಂದರ್ಭದಲ್ಲಿ ಭಾಗವಹಿಸಿದ್ದರು. ಶಾಲೆಯ ಅಧ್ಯಕ್ಷರಾದ ಹೊನ್ನಪ್ಪ ಧ್ವಜಾರೋಹಣ ನೆರವೇರಿಸಿದರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿನಾಯಕ್ ಭಟ್ ನೆಲೆಮಾವು ಇವರು ಸ್ವಾತಂತ್ರ್ಯೋತ್ಸವದ ಆಚರಣೆಯ ಕುರಿತಾಗಿ ಮಾತನಾಡಿದರು .ಕೃಷ್ಣ ಭಟ್ ಇವರು ಮಕ್ಕಳನ್ನು ಉದ್ದೇಶಿಸಿ ಹಿತ ನುಡಿಗಳನ್ನು ಆಡಿದರು. ಅರ್ಚನಾ ಮಡ್ಗಾಂವಕರ್ ಇವರು ಕಾರ್ಯಕ್ರಮ ನಿರೂಪಿಸಿದರು. ನಂತರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು .
ನೆಲೆಮಾವು ಶಾಲೆಯಲ್ಲಿ 75 ನೇ ಸ್ವಾತಂತ್ರೋತ್ಸವ ದಿನ ಆಚರಣೆ
