ಕಾರವಾರದ ಬಾಲಮಂದಿರ ಪ್ರೌಢಶಾಲೆ, ಹಿಂದೂ ಹೈಸ್ಕೂಲ್ ಹಾಗೂ ಸುಮತಿ ದಾಮ್ಲೆ ಪ್ರೌಢಶಾಲೆ ಇವುಗಳ ಜಂಟಿ ಆಶ್ರಯದಲ್ಲಿ 75ನೇ ಸ್ವಾತಂತ್ರ್ಯೋತ್ಸವವನ್ನು ಅದ್ಧೂರಿಯಿಂದ ಆಚರಿಸಲಾಯಿತು. ಕಾರವಾರ ಎಜ್ಯುಕೇಶನ್ ಸೊಸೈಟಿಯ ಆಡಳಿತಾಧಿಕಾರಿ ಜಿ.ಪಿ.ಕಾಮತ್ ಧ್ವಜಾರೋಹಣ ನೆರವೇರಿಸಿದರು.
ಕುಮಟಾ ತಾಲೂಕಿನ ಹಿರೇಗುತ್ತಿ ವ್ಯವಸಾಯ ಸೇವಾ ಸಹಕಾರಿ ಸಂಘದ ಧ್ವಜಾರೋಹಣವನ್ನು ಅಧ್ಯಕ್ಷ ನೀಲಕಂಠ ಎನ್.ನಾಯಕ ನೆರವೇರಿಸಿದರು.
ಕುಮಟಾ ತಾಲೂಕಿನ ಹಿರೇಗುತ್ತಿಯ ಗ್ರಾಮ ಪಂಚಾಯತ್‌ನಲ್ಲಿ ಉಪಾಧ್ಯಕ್ಷ ಶಾಂತಾ ನಾಯಕ 76ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು.
ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (ಕ್ರಿಮ್ಸ್) ಸ್ವಾತಂತ್ರ್ಯೋತ್ಸವದ ನಿಮಿತ್ತ ಸಂಸ್ಥೆಯ ನಿರ್ದೇಶಕ ಡಾ.ಗಜಾನನ ನಾಯಕ ಧ್ವಜಾರೋಹಣ ನೆರವೇರಿಸಿದರು. ವೈದ್ಯಕೀಯ ಅಧೀಕ್ಷಕ ಡಾ.ಶಿವಾನಂದ ಕುಡ್ತರಕರ್, ಪ್ರಾಂಶುಪಾಲ ಡಾ.ಶಿವಕುಮಾರ ಜಿ.ಎಲ್., ಆರ್‌ಎಂಓ ಡಾ.ವೆಂಕಟೇಶ್ ಆರ್. ಇದ್ದರು. ಡಾ.ಪ್ರಮೋದಕುಮಾರ ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು. ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ನಿಧಿ ಗೌಡ ನಿರೂಪಣೆ ಮಾಡಿದರು. ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ದೇಶಭಕ್ತಿಗೀತೆ ಹಾಡಿದರು.
ಕುಮಟಾ ತಾಲೂಕಿನ ಹಿರೇಗುತ್ತಿ ಶ್ರೀ ಬ್ರಹ್ಮಜಟಕ ಯುವಕ ಸಂಘದ ಅಧ್ಯಕ್ಷ ಜಗದೀಶ ಎನ್.ನಾಯಕ (ಪಪ್ಪು) ಸ್ವಾತಂತ್ರ್ಯೋತ್ಸವದ ಧ್ವಜರೋಹಣ ನೆರವೇರಿಸಿದರು. ಯುವಕ ಸಂಘದ ಪದಾಧಿಕಾರಿಗಳು ಇದ್ದರು.
ಕುಮಟಾ ತಾಲೂಕಿನ ಹಿರೇಗುತ್ತಿ ಸೆಕೆಂಡರಿ ಹೈಸ್ಕೂಲಿನಲ್ಲಿ ಅಜಾದಿ ಕಾ ಅಮೃತ್ ಮಹೋತ್ಸವದ ನಿಮಿತ್ತ ಮಹಾತ್ಮಗಾಂಧೀ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹೊನ್ನಪ್ಪ ಎನ್.ನಾಯಕ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು.
ಅಂಕೋಲಾ ಪಟ್ಟಣದ ಕನ್ನಡ ಭವನದಲ್ಲಿ ಕರ್ನಾಟಕ ಸಂಘದ ವತಿಯಿಂದ ಸ್ವಾತಂತ್ರö್ಯದ ಅಮೃತ ಮಹೋತ್ಸವದ ನಿಮಿತ್ತ ಸಂಘದ ಅಧ್ಯಕ್ಷ ರಾಜೀವ ನಾಯಕ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡವರು ರಾಷ್ಟ್ರ ಗೀತೆ ಹಾಡಿ ಗೌರವ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಅರವಿಂದ ನಾಯಕ, ಸಹಕಾರ್ಯದರ್ಶಿ ವಾಸುದೇವ ನಾಯಕ, ವಿಶೇಷ ಆಮಂತ್ರಿತರಾದ ರವೀಂದ್ರ ಕೇಣಿ, ದುರ್ಗಾನಂದ ದೇಸಾಯಿ ಹಾಗೂ ಕಾರ್ಯಕಾರಿ ಮಂಡಳಿ ಸದಸ್ಯರು ಹಾಜರಿದ್ದರು.
ಕಾರವಾರ ತಾಲೂಕಿನ ನಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷೆ ಲಲಿತಾ ಗೌಡ ಧ್ವಜಾರೋಹಣ ನೆರವೇರಿಸಿದರು.
ಕಾರವಾರ ತಾಲೂಕಿನ ಹಣಕೋಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಟೆಗಾಳಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅಮೃತ ಸರೋವರ ಅಭಿಯಾನದ ಅಂಗವಾಗಿ ಅಭಿವೃದ್ಧಿಪಡಿಸಲಾದ ಭೀಮ್‌ಕೋಲ್ ಕೆರೆಯ ದಂಡೆಯ ಮೇಲೆ 75ನೇ ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಧ್ವಜಾರೋಹಣವನ್ನು ಕೇಂದ್ರ ಸರಕಾರದ ಆದೇಶದಂತೆ ಗ್ರಾಮದ ಹಿರಿಯ ನಾಗರಿಕ ಶಾಂತಾರಾಮ್ ಥಾಮಸೆ ಅವರಿಂದ ನೆರವೇರಿಸಲಾಯಿತು.
ಸಿದ್ದಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ನ ಮುಗದೂರು ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಅಮೃತ ಸರೋವರ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ 75ನೇ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ಮಾಜಿ ಸೈನಿಕ ವೀರಭದ್ರ ಪಾಟೀಲ್ ನೆರವೇರಿಸಿದರು.