ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಕಾರ್ಯಾಲಯದಲ್ಲಿ 75ನೇ ಸ್ವಾತಂತ್ರೋತ್ಸವದ ಅಂಗವಾಗಿ ಅಧ್ಯಕ್ಷ ರವೀಂದ್ರ ನಾಯ್ಕ ಧ್ವಜಾರೋಹಣ ಮಾಡಿದರು. ಈ ವೇಳೆ ಅರಣ್ಯ ಅತಿಕ್ರಮಣದಾರರ ಕುಟುಂಬದವಳಾಗಿ ಕಳೆದ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದೀಕ್ಷಾ ನಾಯ್ಕ ಹಾಗೂ ಶಿರಸಿ ಪತ್ರಕರ್ತ ಸಂಘದಿಂದ ಮಾಧ್ಯಮ ಶ್ರೀ ಪ್ರಶಸ್ತಿ ವಿಜೇತ ಪ್ರದೀಪ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.
ಶಿರಸಿ ತಾಲೂಕಿನ ಹೆಗಡೆಕಟ್ಟಾ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ಅಂಗವಾಗಿ ಎಸ್‌ಡಿಎಂಸಿ ಅಧ್ಯಕ್ಷ ದೇವರು ಹೆಗಡೆ ಧ್ವಜಾರೋಹಣ ನೆರವೇರಿಸಿದರು.
ಶಿರಸಿ ತಾಲೂಕಿನ ಹೊಸ್ಕೆರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಬಂಡಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಂಡಲ ಸರ್ಕಾರಿ ಪ್ರೌಢಶಾಲೆ, ಗ್ರಾಮ ಪಂಚಾಯತ್ ಬಂಡಲದಲ್ಲಿ ಅಮೃತ ಮಹೋತ್ಸವದ ನಿಮಿತ್ತ ಧ್ವಜಾರೋಹಣ ಹಾಗೂ ವಿದ್ಯಾರ್ಥಿಗಳ ಪಥ ಸಂಚಲನ ಕಾರ್ಯಕ್ರಮ ನಡೆಯಿತು.
ಯಲ್ಲಾಪುರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ಅಂಗವಾಗಿ ಪ್ರಾಂಶುಪಾಲ ಡಿ.ಎಸ್.ಭಟ್ಟ ಧ್ವಜಾರೋಹಣ ನೆರವೇರಿಸಿದರು.
ಯಲ್ಲಾಪುರದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಹಶೀಲ್ದಾರ ಕಚೇರಿ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಗಾಂಧಿ ಘಟಕದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಸಾಂಸ್ಕೃತಿಕ ಹಾಗೂ ದೇಶಭಕ್ತಿ ಕಾರ್ಯಕ್ರಮಗಳು ನಡೆದವು.
ಯಲ್ಲಾಪುರ ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ನಿಮಿತ್ತ ಸಂಸ್ಥೆಯ ಉಪಾಧ್ಯಕ್ಷ ಶ್ರೀನಿವಾಸ ಹೆಬ್ಬಾರ್ ಧ್ವಜಾರೋಹಣ ನೆರವೇರಿಸಿದರು. ವಿಧಾನ ಪರಿಷತ್ತಿನ ಸದಸ್ಯ ಶಾಂತಾರಾಮ ಸಿದ್ದಿ ಭಾಗವಹಿಸಿದ್ದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿರಸಿಯ ಗ್ರೀನ್ ಕೇರ್ ಸಂಸ್ಥೆ, ಐಎಂಎ ಲೈಫ್‌ಲೈನ್, ಬ್ಲಡ್ ಬ್ಯಾಂಕ್, ಹೋಲಿ ರೋಜರಿ ಯೂತ್ ಕ್ಲಬ್, ಯಲ್ಲಾಪುರದ ತಾಲೂಕು ಆಸ್ಪತ್ರೆ ರಕ್ತ ಸಂಗ್ರಹಣ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಸ್ವಾತಂತ್ರ‍್ಯೋತ್ಸವದ ನಿಮಿತ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಪಟ್ಟಣದ ಹೋಲಿ ರೋಜರಿ ಪ್ರೈಮರಿ ಶಾಲೆಯಲ್ಲಿ ನಡೆಯಿತು.
ಜೊಯಿಡಾ ತಾಲೂಕಿನ ತಹಶೀಲ್ದಾರರ ಕಚೇರಿ ಮತ್ತು ಎಲ್ಲಾ ಸರ್ಕಾರಿ ಕಚೇರಿಯಲ್ಲಿ 75ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ತಹಶೀಲ್ದಾರರ ಕಚೇರಿ ಆವರಣದಲ್ಲಿ ಉಪವಿಭಾಗಾಧಿಕಾರಿ ವಿಜಯಲಕ್ಷ್ಮಿ ರಾಯಕೋಡ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಧ್ವಜಾರೋಹಣ ಮಾಡಿದರು.
ಸ್ವಾತಂತ್ರ್ಯೋತ್ಸವದ ನಿಮಿತ್ತ ದಾಂಡೇಲಿಯ ಕೋಗಿಲಬನ/ಬಡಕಾನಶಿರಡಾ ಗ್ರಾಮ ಪಂಚಾಯತ್ತಿಯಲ್ಲಿ ನಿವೃತ್ತ ಸೈನಿಕ ಹಾಗೂ ಹಿರಿಯ ಮಹಿಳೆ ಮತ್ತು ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಸಾಧನೆಗೈದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯ್ತು.
ಹೊನ್ನಾವರ ಕವಲಕ್ಕಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಮಾಜಿ ಪ್ರಾಂಶುಪಾಲ ವಿ.ಆಯ್.ಹೆಗಡೆ ಧ್ವಜಾರೋಹಣ ನೆರವೇರಿಸಿದರು. ವಿವಿಧ ಮನರಂಜನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಸಂದರ್ಭದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಅಂಕೋಲಾ ತಾಲೂಕಿನ ಹಿಲ್ಲೂರು ಮೀನುಗಾರರ ಸಹಕಾರಿ ಸಂಘದ ಸಂಸ್ಥಾಪಕ ಅಧ್ಯಕ್ಷ ಹರಿಹರ ವಿ.ಹರಿಕಾಂತ ಸಂಘದ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದರು.
ಸದಾ ಒಂದಿಲ್ಲೊಂದು ಸಮಾಜಮುಖಿ ಚಟುವಟಿಕೆ ನಡೆಸುತ್ತಿರುವ ಸಿದ್ದಾಪುರ ತಾಲೂಕಿನ ತ್ಯಾರ್ಸಿಯ ಸಮೃದ್ಧಿ ಯುವ ಬಳಗದ ವತಿಯಿಂದ ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಪ್ರಯುಕ್ತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಸಮಾರಂಭದಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಮಂಜುನಾಥ ನಾಯ್ಕ, ಸುಮಂತ್ ಹೆಗಡೆ, ಸೌಜನ್ಯ ಗೌಡರ್, ಅಂಕಿತಾ ನಾಯ್ಕ, ದೇವರಾಜ ನಾಯ್ಕ, ಐಶ್ವರ್ಯ ಗೌಡರ್, ಆಶಾ ಗೊಂಡ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ರಚನಾ ಗೌಡರ್, ಹೇಮಾವತಿ ಗೊಂಡ, ಗೀತಾ ಗೊಂಡ, ಲೀಲಾ ನಾಯ್ಕ ಅವರನ್ನು ಗ್ರಾಮಸ್ಥರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.