ಭಟ್ಕಳ: ಶಿಕ್ಷಣ ಇಲಾಖೆಯ ಸುತ್ತೋಲೆಯಂತೆ ಆ.13, 14, 15ರವರೆಗೆ ಸ್ವಾತಂತ್ರö್ಯದ ಅಮೃತ ಮಹೋತ್ಸವದ ನಿಮಿತ್ತ ಧ್ವಜಾರೋಹಣ ಮಾಡಲು ಆದೇಶಿಸಲಾಗಿದ್ದು, ಅದರಂತೆ ಇಲ್ಲಿನ ಸೋನಾರಕೇರಿ ಸರಕಾರಿ ಪ್ರೌಢಶಾಲೆಯಲ್ಲಿ ಇದೇ ಮೊದಲ ಬಾರಿಗೆ ಹಮ್ಮಿಕೊಂಡಿದ್ದ ಧ್ವಜಾರೋಹಣ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.
ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಪೂರ್ವಭಾವಿಯಾಗಿ ಶಾಲಾ ಮಕ್ಕಳಿಗೆ ವಿವಿಧ ಸ್ಪರ್ಧೆ (ಚಿತ್ರಕಲೆ, ದೇಶಭಕ್ತಿ ಗೀತೆ, ಭಾಷಣ, ಪ್ರಬಂಧ)ಗಳನ್ನು ಏರ್ಪಡಿಸಲಾಗಿತ್ತು. ಸೋಮವಾರದ ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್‌ಡಿಎಮ್‌ಸಿ ಅಧ್ಯಕ್ಷ ರಾಮ ನಾಯ್ಕ ನೆರವೇರಿಸಿದರು. ಶಾಲಾ ಮುಖ್ಯಶಿಕ್ಷಕಿ ಯಲ್ಲಮ್ಮ ಪ್ರಾಸ್ತಾವಿಕ ಮಾತನಾಡಿ, ಸರ್ವರನ್ನು ಸ್ವಾಗತಿಸಿದರು.
ಕೃಷ್ಣಾ ನಾಯ್ಕ ಆಸರಕೇರಿ ಮಾತನಾಡಿ, ಸ್ವಾತಂತ್ರö್ಯದ ಮಹತ್ವ, ಉಳಿಸಿಕೊಂಡು ಹೋಗುವ, ದೇಶಾಭಿಮಾನ ಬೆಳೆಸಿಕೊಳ್ಳುವ ಕುರಿತು ವಿವರಿಸಿದರು. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿ ಪ್ರೋತ್ಸಾಹಿಸಲಾಯಿತು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ವೆಂಕಟೇಶ ನಾಯ್ಕ ಮಕ್ಕಳಿಗೆ ಶುಭ ಕೋರಿದರು. ಶಿಕ್ಷಕ ಮಂಜುನಾಥ ನಾಯ್ಕ ವಂದನಾರ್ಪಣೆ ಮಾಡಿದರು. ಮಕ್ಕಳಿಗೆ ಸಿಹಿ ವಿತರಿಸಿದ ಎಲ್ಲಾ ದಾನಿಗಳಿಗೆ ಧನ್ಯವಾದಗಳನ್ನು ಅರ್ಪಿಸಲಾಯಿತು.
ಕಾರ್ಯಕ್ರಮದಲ್ಲಿ ಎಸ್‌ಡಿಎಮ್.ಸಿ ಸದಸ್ಯರು, ಊರ ಮುಖಂಡರು, ವಿವಿಧ ಸಂಘ- ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಶಿಕ್ಷಕ- ಸಿಬ್ಬಂದಿ ವರ್ಗದವರು, ಪಾಲಕರು, ಮಕ್ಕಳು ಹಾಜರಿದ್ದರು.