• Slide
  Slide
  Slide
  previous arrow
  next arrow
 • ವಿಜ್ಞಾನ ಗೋಷ್ಠಿ, ನಾಟಕ ಸ್ಪರ್ಧೆ ಯಶಸ್ವಿ

  300x250 AD

  ಕುಮಟಾ: ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯಗಳ ಸಂಯುಕ್ತಾಶ್ರಯದಲ್ಲಿ ಧಾರೇಶ್ವರದ ಜನತಾ ವಿದ್ಯಾಲಯದಲ್ಲಿ ತಾಲೂಕು ಮಟ್ಟದ ವಿಜ್ಞಾನ ಗೋಷ್ಠಿ ಮತ್ತು ನಾಟಕ ಸ್ಪರ್ಧೆ ನಡೆಯಿತು.

  ಡಯಟ್ ಪ್ರಾಂಶುಪಾಲ ಎನ್.ಜಿ.ನಾಯ್ಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ರೇಖಾ ನಾಯ್ಕ, ಉಪನ್ಯಾಸಕ ನಾಗರಾಜ ಗೌಡ, ಡಯಟ್ ಉಪನ್ಯಾಸಕ ಕೆ.ಪಿ.ಭಂಡಾರಿ ಪಾಲ್ಗೊಂಡಿದ್ದರು.

  300x250 AD

  ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಕೋಶಾಧ್ಯಕ್ಷ ನಾಗರಾಜ ಶೇಟ್ ವಹಿಸಿದ್ದರು. ಮುಖ್ಯಾಧ್ಯಾಪಕ ಗೋಪಿ ಭಜಂತ್ರಿ ಸ್ವಾಗತಿಸಿದರು. ಶಿಕ್ಷಣ ಸಂಯೋಜಕಿ ಜಯಶ್ರೀ ಎ.ಪಿ ಪ್ರಾಸ್ತಾವಿಸಿದರು. ಪ್ರತಿಭಾ ಭಾಗ್ವತ್ ನಿರೂಪಿಸಿದರು. ಶಿಕ್ಷಕಿ ಕಲ್ಪನಾ ಶಿವೇಶ್ವರ ವಂದಿಸಿದರು. ಸ್ಪರ್ಧೆಯ ನಿರ್ಣಾಯಕರಾಗಿ ವಿಜಯಲಕ್ಷ್ಮಿ ಹೆಗಡೆ ಕಾರ್ಯನಿರ್ವಹಿಸಿದ್ದರು. ಎಸ್‌ಡಿಎಂಸಿ ಅಧ್ಯಕ್ಷ ಮಂಜುನಾಥ ಭಟ್, ಶಿಕ್ಷಣ ಸಂಯೋಜಕಿ ದೀಪಾ ಕಾಮತ್, ಶಿಕ್ಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

  Share This
  300x250 AD
  300x250 AD
  300x250 AD
  Leaderboard Ad
  Back to top