• Slide
    Slide
    Slide
    previous arrow
    next arrow
  • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    300x250 AD

    ಕಾರವಾರ: ಜಿಲ್ಲಾ ಸರಕಾರಿ ನೌಕರರ ಪತ್ತಿನ ಸಹಕಾರಿ ಸಂಘದ ವತಿಯಿಂದ ಸಂಘದ ಸದಸ್ಯರುಗಳ ಮಕ್ಕಳಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗಗಳಲ್ಲಿ ಗರಿಷ್ಟ ಅಂಕ ಪಡೆದ ಮೊದಲ ಮೂರು ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುತ್ತಿರುವುದರಿಂದ ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಮಾರ್ಕ್ಸ್ ಕಾರ್ಡ್ ಪ್ರತಿಯೊಂದಿಗೆ ‘ಅಧ್ಯಕ್ಷರು, ಉತ್ತರ ಕನ್ನಡ ಜಿಲ್ಲಾ ಸರಕಾರಿ ನೌಕರರ ಪತ್ತಿನ ಸಹಕಾರ ಸಂಘ ನಿಯಮಿತ, ಕಾರವಾರ’ಕ್ಕೆ ಆ.31ರೊಳಗಾಗಿ ಅರ್ಜಿ ಸಲ್ಲಿಸಬೇಕು. ಜಿಲ್ಲಾ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಸದಸ್ಯರುಗಳ ಮಕ್ಕಳು ಮಾತ್ರ ಈ ಪ್ರತಿಭಾ ಪುರಸ್ಕಾರಕ್ಕೆ ಅರ್ಹರು.

    300x250 AD

    ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 08382- 226 970ಗೆ ಅಥವಾ ಕಾರ್ಯದರ್ಶಿ ಮೊ.ಸಂ: 82178 79585, ಅಧ್ಯಕ್ಷರ ಮೊ.ಸಂಖ್ಯೆ: 94487 29177ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಸರಕಾರಿ ನೌಕರರ ಪತ್ತಿನ ಸಂಘದ ಅಧ್ಯಕ್ಷ ಸಂಜೀವಕುಮರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top