• Slide
    Slide
    Slide
    previous arrow
    next arrow
  • ಸಂಸದೀಯ ಮಂಡಳಿಯ ಸದಸ್ಯರಾಗಿ ಬಿ.ಎಲ್. ಸಂತೋಷ್, ಬಿ.ಎಸ್.ವೈ ಆಯ್ಕೆ

    300x250 AD

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಅವರನ್ನು ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರನ್ನಾಗಿ ನೇಮಕ ಮಾಡಿರುವ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಂತಸ ವ್ಯಕ್ತಪಡಿಸಿದ್ದಾರೆ.

    ರಾಜ್ಯ ಸರ್ಕಾರದ ಸಾಧನೆಗಳನ್ನು ಮನೆಮನೆಗೆ ತಲುಪಿಸಿ ಪಕ್ಷವನ್ನು ಚುನಾವಣೆಗೆ ಸಜ್ಜುಗೊಳಿಸುವ ಕಾರ್ಯ ಯಡಿಯೂರಪ್ಪ ಅವರಂತಹ ಧುರೀಣರ ಹೆಗಲಿಗೇರಿರುವುದು ರಾಜ್ಯದ ಲಕ್ಷಾಂತರ ಕಾರ್ಯಕರ್ತರಲ್ಲಿ ಹೊಸ ಹುರುಪು ತಂದಿದೆ ಎಂದಿದ್ದಾರೆ. ಶ್ರಮವರಿಯದ ಸೇನಾನಿಯಾಗಿ ಪಕ್ಷಕ್ಕಾಗಿ ಅಂದಿಗೂ ಇಂದಿಗೂ ಸೇವೆ ಸಲ್ಲಿಸುತ್ತಿರುವ ಯಡಿಯೂರಪ್ಪನವರ ನಾಯಕತ್ವ ಗುಣ ಹಾಗೂ ಅನುಭವ ಪಕ್ಷದ ಪಾಲಿಗೆ ಅತಿದೊಡ್ಡ ಶಕ್ತಿಯಾಗಿ ಪರಿಣಮಿಸಲಿದೆ ಎಂದು ಅವರು ಅಭಿಪ್ರಾಯಿಸಿದ್ದಾರೆ.

    300x250 AD

    ಸಂಸದೀಯ ಮಂಡಳಿಗೆ ಬಿ.ಎಸ್.ಯಡಿಯೂರಪ್ಪ ಹಾಗೂ ಶ್ರೀ ಬಿ.ಎಲ್.ಸಂತೋಷ್ ನೇಮಕವಾಗಿರುವ ವಿಚಾರ ವಯಕ್ತಿಕವಾಗಿ ನನಗೆ ಅತ್ಯಂತ ಖುಷಿ ನೀಡಿದ್ದು ಅವರಿಂದ ಮಾರ್ಗದರ್ಶನ ಪಡೆಯಲು ಉತ್ಸುಕನಾಗಿ ಎದುರು ನೋಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top