• Slide
    Slide
    Slide
    previous arrow
    next arrow
  • ಮಕ್ಕಳ ರಕ್ಷಣೆಯ ವಿಚಾರದಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದು: ಮುಲ್ಲೈ ಮುಗಿಲನ್

    300x250 AD

    ಕಾರವಾರ: ಬಾಲ ಕಾರ್ಮಿಕತೆ, ಮಾನವ ಕಳ್ಳಸಾಗಾಣಿಕೆ, ಮಕ್ಕಳ ದೌರ್ಜನ್ಯ ಸಾಮಾಜಿಕ ಪಿಡುಗಾಗಿದ್ದು, ಅವುಗಳನ್ನು ತೊಡೆದು ಹಾಕುವಲ್ಲಿ ಹಾಗೂ ಮಕ್ಕಳ ರಕ್ಷಣೆಯ ವಿಚಾರದಲ್ಲಿ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಹೇಳಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಮಕ್ಕಳ ವಿಶೇಷ ಪೊಲೀಸ್ ಘಟಕದ ಸಹಯೋಗದಲ್ಲಿ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ)ಕಾಯ್ದೆ1986, ತಿದ್ದುಪಡಿ 2016, ಪೊಕ್ಲೋ ಕಾಯ್ದೆ-2012 ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ವಿವಿಧ ಕಾಯ್ದೆಗಳ, ನಿಯಮಗಳ ಕುರಿತು ಭಾಗೀದಾರರಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಹಾಗೂ ಮಕ್ಕಳ ಸ್ನೇಹಿ ಪೊಲೀಸ್ ಪುಸ್ತಕ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

    ನಿಮ್ಮ ಮಕ್ಕಳ ಭವಿಷ್ಯ, ರಕ್ಷಣೆಯ ವಿಚಾರದಲ್ಲಿ ಹೇಗೆ ಚಿಂತಿಸುತ್ತೀರೋ ಹಾಗೇ ಸಮಾಜದಲ್ಲಿ ಶೋಷಣೆ, ದೌರ್ಜನ್ಯಕ್ಕೆ ಒಳಗಾದ ಮಕ್ಕಳ ಭವಿಷ್ಯ, ರಕ್ಷಣೆ, ಹಕ್ಕುಗಳ ಕುರಿತು ಚಿಂತಿಸಬೇಕು. ಪ್ರತಿಯೊಬ್ಬ ಅಧಿಕಾರಿಯು ಈ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿ, ಮಕ್ಕಳ ಭವಿಷ್ಯ ಉಜ್ವಲವಾಗಿ ರೂಪುಗೊಳ್ಳಲು ಸಹಕರಿಸಬೇಕು. ಈ ಕಾಯ್ದೆಗಳ ಸಂಕ್ಷಿಪ್ತ ವಿವರ ಇರುವ ಪ್ರತಿಗಳನ್ನು ಸಾರ್ವಜನಿಕರಿಗೆ ತಲುಪಿಸುವ ಕಾರ್ಯವನ್ನು ಪೊಲೀಸ್ ಇಲಾಖೆ ಹಾಗೂ ಕಾರ್ಮಿಕ ಇಲಾಖೆಯವರು ಮಾಡಬೇಕು. ದೌರ್ಜನ್ಯಕ್ಕೆ, ಶೋಷಣೆಗೆ ಒಳಗಾದವರ, ಮಕ್ಕಳ ಧ್ವನಿಯಾಗಿ ನಾವೆಲ್ಲ ಅಧಿಕಾರಿಗಳು ಕಾರ್ಯನಿರ್ವಹಿಸುವ ಮೂಲಕ ಸಮಾಜದ ಅಭ್ಯುದಯದಲ್ಲಿ ಸರ್ವರ ಪಾತ್ರ ಮಹತ್ವದ್ದಾಗಿದೆ ಎಂಬುದನ್ನು ತಿಳಿಸುವ ಕಾರ್ಯವಾಗಬೇಕು ಎಂದು ಹೇಳಿದರು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ ಪೆನ್ನೇಕ‌ರ್ ಪ್ರಾಸ್ತಾವಿಕವಾಗಿ ಮಾತನಾಡಿ, ಕೆಲಸದ ಒತ್ತಡದ ನಡುವೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಣೆಯನ್ನು ಪೊಲೀಸ್ ಇಲಾಖೆ, ಸಿಬ್ಬಂದಿ ಮಾಡುತ್ತಿದ್ದಾರೆ. ವಿವಿಧ ಸಹಾಯವಾಣಿ ಮೂಲಕ ಮಕ್ಕಳ ಯುವಕ/ತಿಯರ, ವೃದ್ಧರ ರಕ್ಷಣೆಗೆ ಬೇಕಾದ ಅಗತ್ಯ ಕ್ರಮ ವಹಿಸಲಾಗುತ್ತಿದೆ.ನಗರ, ಗ್ರಾಮೀಣ ಪ್ರದೇಶದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಅರಿವು ಮತ್ತು ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಸತ್ರ ನ್ಯಾಯಾಧೀಶ ಡಿ.ಎಸ್.ವಿಜಯಕುಮಾರ, ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯು ಉತ್ತಮವಾಗಿ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದೆ.ಲಿಂಗ ತಾರತಮ್ಯ ಅನುಸರಿಸದೇ ಸರ್ವರಿಗೂ ಒಂದೇ ರೀತಿಯ ಕಾನೂನು ಜಾರಿಯಲ್ಲಿದೆ. ಪೊಲೀಸ್ ಇಲಾಖೆಯು ದಕ್ಷತೆಯಿಂದ ಕಾರ್ಯ ನಿರ್ವಹಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಸಂವಿಧಾನ ನೀಡಿದ ಹಕ್ಕು ಮತ್ತು ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸಿದಲ್ಲಿ ಪ್ರಾಮಾಣಿಕವಾಗಿ ಕಾರ್ಯವೆಸಗಿದಲ್ಲಿ ಮಕ್ಕಳ ಹಕ್ಕುಗಳಿಗೆ, ರಕ್ಷಣೆಗೆ ಯಾವುದೇ ಅಡೆತಡೆಗಳಿಗೂ ಆಸ್ಪದವಿಲ್ಲದಂತಾಗುತ್ತದೆ ಎಂದು ತಿಳಿಸಿದರು. ರಾಜ್ಯಸರಕಾರವು 14 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುತ್ತಿದ್ದು, ಮೂಲಭೂತ ಸೌಕರ್ಯಗಳ ಅವಶ್ಯಕತೆ ಇರುವವರಿಗೆ ಸೌಲಭ್ಯ ಸಿಗುವಂತೆ ಮಾಡುವ ಜವಾಬ್ದಾರಿಯನ್ನು ಸರಕಾರ ದಕ್ಷತೆಯಿಂದ ಮಾಡುತ್ತಿದೆ. ಮಕ್ಕಳು ಬೌದ್ಧಿಕ, ಶಾರೀರಿಕ, ಶೈಕ್ಷಣಿಕ, ಮಾನಸಿಕವಾಗಿ   ಸದೃಢವಾಗಿ ಬೆಳೆಯಲು ಅನುಕೂಲವಾಗುವಂತೆ ಹಾಗೂ ಅವರನ್ನು ರಕ್ಷಿಸುವ ಸಲುವಾಗಿ ಪೊಕ್ಸ್‌ ಕಾಯ್ದೆ ಜಾರಿಗೆ ತರಲಾಗಿದೆ. ಸದೃಢ ದೇಶ ಕಟ್ಟಲು ಸರ್ವಾಂಗೀಣ ಅಭಿವೃದ್ಧಿ ಸಾಧಿಸುವುದು ಅವಶ್ಯವಾಗಿದೆ ಎಂದು ತಿಳಿಸಿದರು.

    300x250 AD

    ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ. ಗಣೇಶ ಮಾತನಾಡಿ, ಮಾನವ ಕಳ್ಳಸಾಗಾಣಿಕೆ ಮಕ್ಕಳಿಂದ ವಯೋವೃದ್ಧರಾದಿಯಾಗಿ ಕಾರ್ಯವ್ಯಾಪ್ತಿ ಪಡೆದುಕೊಂಡಿದ ಹಾಗಾಗಿ ಮಾನವನ ಮೂಲಭೂತ ಹಕ್ಕುಗಳ ರಕ್ಷಣೆ ಕಾನೂನಾತ್ಮಕವಾಗಿ ಅವಶ್ಯಕವಾಗಿದೆ. ಸರಕಾರ ಮಕ್ಕಳಿಗೆ ಸವಲತ್ತುಗಳನ್ನು ನೀಡಿದೆ, ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ದಕ್ಷ ಪ್ರಾಮಾಣಿಕವಾಗಿ ನಿರ್ವಹಿಸುವ ಮೂಲಕ ಸುಭದ್ರ ಸಮಾಜ ನಿರ್ಮಾಣವಾಗಲು ಶ್ರಮಿಸಬೇಕು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆ ಹಾಗೂ ಅವರ ಶೋಷಣೆ ನಿಲ್ಲಿಸಲು ನಿರಂತರವಾಗಿ ಶ್ರಮಿಸುತ್ತಿರುವ ಮಕ್ಕಳ ವಿಶೇಷ ಪೊಲೀಸ್ ಘಟಕದ ರುದ್ರೇಶ್ ಮೇತ್ರಾಣಿ ಮತ್ತು ಜಿಲ್ಲಾ ಕಾರ್ಮಿಕ ಅಧಿಕಾರಿ ಅಕ್ಟರ್ ಹಬೀಬಸಾಬ ಮುಲ್ಲಾ ಅವರನ್ನು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ವತಿಯಿಂದ ಸನ್ಮಾನಿಸಲಾಯಿತು.

    ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಸಿಇಒ ಪ್ರಿಯಾಂಗಾ, ಹಿರಿಯ ಸಿವಿಲ್ ನ್ಯಾಯಾಧೀಶರಾದ ರೇಣುಕಾ ರಾಯ್ಕರ, ಕೇಂದ್ರ ಸರಕಾರದ ಕಾರ್ಯದರ್ಶಿ ಹೇಮಾ ನಾಯ್ಕ, ಸರಕಾರಿ ವಕೀಲರಾದ ತನುಜಾ ಹೊಸಪಟ್ಟಣ ಸೇರಿದಂತೆ ಅನೇಕರು ಇದ್ದರು,

    Share This
    300x250 AD
    300x250 AD
    300x250 AD
    Leaderboard Ad
    Back to top