
ಸಿದ್ದಾಪುರ: ತಾಲೂಕಿನಲ್ಲಿ ಆ.2 ಸೋಮವಾರ 1300 ಕೊರೊನಾ ಲಸಿಕೆ ಲಭ್ಯವಿದ್ದು, ಇದನ್ನು 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಆದ್ಯತೆ ಮೇರೆಗೆ ಮೊದಲನೇ ಹಾಗೂ ಎರಡನೇ ಡೋಸ್ ಲಸಿಕೆ ನೀಡಲಾಗುತ್ತದೆ. ಕಾರಣ ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ತಾಲೂಕಾ ಆರೋಗ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
1300 ಡೋಸನ್ನು ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ ಕ್ಯಾದಗಿಯಲ್ಲಿ 200, ಪ್ರಾಥಮಿಕ ಆರೋಗ್ಯ ಕೇಂದ್ರ ಬಿಳಿಗಿಯಲ್ಲಿ 200, ಪ್ರಾಥಮಿಕ ಆರೋಗ್ಯ ಕೇಂದ್ರ ದೊಡ್ಮನೆಯಲ್ಲಿ 100, ಪ್ರಾಥಮಿಕ ಆರೋಗ್ಯ ಕೇಂದ್ರ ಕಾನಸೂರಿನಲ್ಲಿ 200, ಪ್ರಾಥಮಿಕ ಆರೋಗ್ಯ ಕೇಂದ್ರ ಕೊರ್ಲಕೈನಲ್ಲಿ 200, ಪ್ರಾಥಮಿಕ ಆರೋಗ್ಯ ಕೇಂದ್ರ ಕೋಲ್ ಸಿರ್ಸಿಯಲ್ಲಿ 200, ಹಿರಿಯ ಪ್ರಾಥಮಿಕ ಶಾಲೆ ಬಾಲಿಕೊಪ್ಪದಲ್ಲಿ 200 ಡೋಸ್ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.