• Slide
    Slide
    Slide
    previous arrow
    next arrow
  • ಚೆಸ್ ಮತ್ತು ಯೋಗಾಸನ ಸ್ಪರ್ಧೆಯಲ್ಲಿ ಲಯನ್ಸ್ ವಿದ್ಯಾರ್ಥಿಗಳ ಸಾಧನೆ

    300x250 AD

    ಶಿರಸಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಿರಸಿ ಶೈಕ್ಷಣಿಕ ಜಿಲ್ಲೆ ಶಿರಸಿ (ಉ.ಕ) ಇವರ ಸಹಯೋಗದಲ್ಲಿ ಆ. 19 ರಂದು ನಡೆದ 2022-23 ನೇ ಸಾಲಿನ ನಗರ ಉತ್ತರ ವಲಯದ ಪ್ರೌಢ ವಿಭಾಗದ ಚೆಸ್ ಮತ್ತು ಯೋಗಾಸನ ಸ್ಪರ್ಧೆಯಲ್ಲಿ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು, ಬಾಲಕರ ಚೆಸ್ ವಿಭಾಗದಲ್ಲಿ 10 ನೇ ತರಗತಿಯ ಆದಿತ್ಯ ರಾಜೇಂದ್ರ ಜೋಶಿ ಹಾಗೂ 9ನೇ ತರಗತಿಯ ಪ್ರಸನ್ನ ಹೆಗಡೆ ಪ್ರಥಮ ಸ್ಥಾನ ಪಡೆದಿದ್ದಾರೆ.

    ಯೋಗಾಸನ ಸ್ಪರ್ಧೆಯ:ಬಾಲಕರ ವಿಭಾಗದಲ್ಲಿ 10ನೇ ತರಗತಿಯ ರೋಹಿತ ಪಿ.ಶೆಟ್ಟಿ ಪ್ರಥಮ ಸ್ಥಾನ ಬಾಲಕಿಯರ ವಿಭಾಗದಲ್ಲಿ 10ನೇ ತರಗತಿಯ ದಿಶಾ ಹೆಗಡೆ ಪ್ರಥಮ ಸ್ಥಾನ, ಪಡೆಯುವುದರೊಂದಿಗೆ ತಾಲೂಕಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
    ಸಾಧನೆಗೈದ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕ ನಾಗರಾಜ ಜೋಗಳೇಕರ್ ಮಾರ್ಗದರ್ಶನ ನೀಡಿದ್ದು, ವಿದ್ಯಾರ್ಥಿಗಳ ಈ ಸಾಧನೆಗೆ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ಶಾಲೆಯ ಮುಖ್ಯೋಪಾಧ್ಯಾಪಕ ಶಶಾಂಕ ಹೆಗಡೆ, ಶಿಕ್ಷಕ-ಶಿಕ್ಷಕೇತರ ವೃಂದ, ಲಯನ್ಸ್ ಬಳಗ ಮತ್ತು ಪಾಲಕರ ವೃಂದ ಆಶೀರ್ವಾದಪೂರ್ವಕವಾಗಿ ಅಭಿನಂದಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top