ಕಾರವಾರ: ಬೆಂಗಳೂರಿನ ವಿದ್ಯಾನಗರದ ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಟತಾ ಕೇಂದ್ರದಲ್ಲಿನ ತರಬೇತಿ ಕೇಂದ್ರಕ್ಕೆ ಅಥ್ಲೆಟಿಕ್ಸ್, ಶೂಟಿಂಗ್ ಹಾಗೂ ಈಜು ಕ್ರೀಡೆಗಳಲ್ಲಿ ಪ್ರತಿಭಾನ್ವಿತರಾಗಿರುವ ಹಾಗೂ ಪ್ರತಿಭೆಗಳನ್ನು ಆಯ್ಕೆ ಮಾಡುವ ಸಲುವಾಗಿ ವಿದ್ಯಾನಗರ ಶ್ರೀಜಯ ಪ್ರಕಾಶ ನಾರಾಯಣ ರಾಷ್ಟಿçÃಯ ಯುವ ತರಬೇತಿ ಕೇಂದ್ರ ಕ್ರೀಡಾ ಶಾಲೆಯಲ್ಲಿ ಆ.23 ಮತ್ತು 24ರಂದು ಆಯ್ಕೆ ಪ್ರಕ್ರಿಯೆಯನ್ನು ಸಂಘಟಿಸುತ್ತಿದೆ. ಜಿಲ್ಲೆಯ ಅರ್ಹ ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರತಿಭಾನ್ವಿತರು ಸದಾವಕಾಶವನ್ನು ಉಪಯೋಗಿಸಿಕೊಳ್ಳಬೇಕು.
ಆಸಕ್ತ 14 ವರ್ಷ ಮೇಲ್ಪಟ್ಟು, 23 ವರ್ಷದೊಳಗಿನ ಅಭ್ಯರ್ಥಿಗಳು ಇತ್ತೀಚಿನ ಭಾವಚಿತ್ರ ಹಾಗೂ ಸಂಬಂಧಿಸಿದ ದಾಖಲೆಗಳ ಮತ್ತು ಸ್ವವಿವರದ ಅರ್ಜಿಯನ್ನು ಆಯ್ಕೆ ಸಂದರ್ಭದಲ್ಲಿ ಸಲ್ಲಿಸಬೇಕು. ಆಯ್ಕೆಗೆ ಹಾಜರಾಗುವ ಕ್ರೀಡಾಪಟುಗಳಿಗೆ ಯಾವುದೇ ದಿನಭತ್ಯೆ, ಪ್ರಯಾಣ ಭತ್ಯೆ ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ: 94808 86551ಗೆ ಸಂಪರ್ಕಿಸಬಹುದಾಗಿದೆ ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಖೇಲೋ ಇಂಡಿಯಾ:ಆ. 23, 24ಕ್ಕೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
