ಕಾರವಾರ: ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಶಿಕ್ಷಣ ಇಲಾಖೆ, ಆಯುಷ್ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಹಾಸ್ಟೆಲ್ ಮಕ್ಕಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಯೋಗಾಥಾನ್-2022 ಕಾರ್ಯಕ್ರಮವನ್ನು ಸಂಘಟಿಸಲಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಜಾಸ್ತಿ ಇರುವುದರಿಂದ ಆ.28ರಂದು ನಡೆಯುವ ಗಿನ್ನಿಸ್ ವಿಶ್ವದಾಖಲೆ ನಿರ್ಮಿಸುವ ಕಾರ್ಯಕ್ರಮವನ್ನು ಸೆ.24ರಂದು ನಿಗದಿಪಡಿಸಲಾಗಿದ್ದು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಗಿನ್ನಿಸ್ ವಿಶ್ವದಾಖಲೆ ನಿರ್ಮಿಸುವ ಯೋಗಥಾನ್ ಕಾರ್ಯಕ್ರಮವನ್ನು ಆಯೋಜಿಸುವ ಕುರಿತು ಆ.24ರಂದು ಜಿಲ್ಲಾ ಪಂಚಾಯತ ಕಾರ್ಯಾಲಯದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಕಾರವಾರ ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.