Slide
Slide
Slide
previous arrow
next arrow

ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಲಯನ್ಸ್ ವಿದ್ಯಾರ್ಥಿನಿಯರ ಸಾಧನೆ

300x250 AD

ಶಿರಸಿ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಬೆಂಗಳೂರು ಜಿಲ್ಲಾ ಘಟಕ ಶಿರಸಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಶಿರಸಿ ಶೈಕ್ಷಣಿಕ ಜಿಲ್ಲೆಯ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ 2022- 23ನೇ ಸಾಲಿನಲ್ಲಿ ಪ್ರೌಢಶಾಲೆಯ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಸರ್ ಸಿ.ವಿ.ರಾಮನ್ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯನ್ನು ಆ. 20 ರಂದು ಯಲ್ಲಾಪುರದ ಹೋಲಿ ರೋಸರಿ ಪ್ರೌಢಶಾಲೆಯಲ್ಲಿ ಏರ್ಪಡಿಸಲಾಗಿತ್ತು. ಈ ರಸಪ್ರಶ್ನೆ ಕಾರ್ಯಕ್ರಮದಲ್ಲಿ ನಗರದ ಲಯನ್ಸ್ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯರಾದ ಕುಮಾರಿ ಸ್ತುತಿ ತುಂಬಾಡಿ ಮತ್ತು ಕುಮಾರಿ ಕ್ಷಿತಿ ಹೆಗಡೆ ಇವರುಗಳು ಭಾಗವಹಿಸಿ ತೃತೀಯ ಸ್ಥಾನವನ್ನು ಗಳಿಸಿಕೊಂಡಿರುದ್ದಾರೆ. ವಿದ್ಯಾರ್ಥಿನಿಯರ ಈ ಸಾಧನೆಗೆ ಮಾರ್ಗದರ್ಶಿ ಶಿಕ್ಷಕರುಗಳಾಗಿದ್ದ ಶ್ರೀಮತಿ ಶ್ರುತಿ ಪವಾರ್ ಮತ್ತು ಶ್ರೀಮತಿ ಕವಿತಾ ಭಟ್ಟ ಹಾಗೂ ವಿಜೇತ ವಿದ್ಯಾರ್ಥಿಗಳನ್ನು, ವಿದ್ಯಾರ್ಥಿಗಳ ಪಾಲಕರನ್ನು ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಸರ್ವಸದಸ್ಯರು, ಶಾಲೆಯ ಮುಖ್ಯೋಪಾಧ್ಯಾಪಕ ಶಶಾಂಕ ಹೆಗಡೆ, ಶಿಕ್ಷಕ-ಶಿಕ್ಷಕೇತರ ವೃಂದ, ಲಯನ್ಸ್ ಬಳಗ ಮತ್ತು ಪಾಲಕರ ವೃಂದ ಆಶೀರ್ವಾದಪೂರ್ವಕವಾಗಿ ಅಭಿನಂದಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top