Slide
Slide
Slide
previous arrow
next arrow

ಮುಂದಿನ ತಿಂಗಳು ಮಾಜಿ ಸಿಎಂ ಕುಮಾರಸ್ವಾಮಿ ಜಿಲ್ಲೆಗೆ ಭೇಟಿ: ಗಣಪಯ್ಯ ಗೌಡ

300x250 AD

ಕುಮಟಾ: ಜಿಲ್ಲೆಯಲ್ಲಿ ಜೆಡಿಎಸ್ ಬಲ ವೃದ್ಧಿಸುವ ಸಂಬಂಧ ಅನೇಕ ಕಾರ್ಯ ಯೋಜನೆಗಳನ್ನು ರೂಪಿಸುವ ಜತೆಗೆ ಪಕ್ಷದಿಂದ ಆರಂಭವಾಗುವ ಪಂಚರತ್ನ ಕಾರ್ಯಕ್ರಮದ ಭಾಗವಾಗಿ ಮುಂದಿನ ತಿಂಗಳು ಮಾಜಿ ಸಿಎಂ ಕುಮಾರಸ್ವಾಮಿ ಅವರು ಈ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜೆಡಿಎಸ್ ಬಲ ಕುಂದಿದೆ. ಪಕ್ಷ ಸಂಘಟನೆ ಮಾಡುವ ಮೂಲಕ ಆಯಾ ಭಾಗದ ಮುಖಂಡರಿಗೆ ಒಂದಿಷ್ಟು ಜವಾಬ್ದಾರಿಗಳನ್ನು ನೀಡುವ ಮೂಲಕ ಪಕ್ಷವನ್ನು ಸಂಘಟಿಸಬೇಕು. ಆ ಸಂಬಂಧ ಇಂದು ಸಭೆ ನಡೆಸಿ, ಆಯಾ ಪ್ರಮುಖರೊಂದಿಗೆ ಚರ್ಚಿಸಲಾಗಿದೆ. ಪಕ್ಷ ಸಂಘಟನೆಯ ಬಗ್ಗೆ ಕೆಲ ಸಲಹೆ, ಸೂಚನೆಯನ್ನು ನೀಡಲಾಗಿದೆ. ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರಕ್ಕೆ ಸೂರಜ ನಾಯ್ಕ ಸೋನಿಯವರನ್ನು ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಈ ಭಾಗದ ಪಕ್ಷ ಸಂಘಟನೆ ಜವಾಬ್ದಾರಿಯನ್ನು ನೀಡಲಾಗಿದೆ. ಈ ಕ್ಷೇತ್ರದಲ್ಲಿ ಈ ಮೊದಲು ಜೆಡಿಎಸ್ ಅಭ್ಯರ್ಥಿಯೇ ಆಯ್ಕೆಯಾಗಿದ್ದರು. ಹಾಗಾಗಿ ಈ ಕ್ಷೇತ್ರದಲ್ಲಿ ಜೆಡಿಎಸ್ ಬಲವನ್ನು ಇನ್ನಷ್ಟು ಪ್ರಬಲಗೊಳಿಸುವ ಮೂಲಕ ಈ ಕ್ಷೇತ್ರದಲ್ಲಿ ಮತ್ತೆ ಜೆಡಿಎಸ್ ಅಭ್ಯರ್ಥಿಯನ್ನೆ ಗೆಲ್ಲಿಸಬೇಕಾಗಿದೆ.ಅದಕ್ಕಾಗಿ ಮುಂದಿನ ದಿನಗಳಲ್ಲಿ ಅಗತ್ಯ ಕಾರ್ಯ ಯೋಜನೆಗಳನ್ನು ರೂಪಿಸಲಾಗುವುದು. ಪಕ್ಷದಿಂದ ಆರಂಭವಾಗುವ ಪಂಚರತ್ನ ಕಾರ್ಯಕ್ರಮದ ಭಾಗವಾಗಿ ಮುಂದಿನ ತಿಂಗಳು ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಈ ಕ್ಷೇತ್ರಕ್ಕೆ ಕರೆಯಿಸಿ, ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಲಾಗುವುದು. ಈ ಕ್ಷೇತ್ರದ ಜನತೆಯಲ್ಲಿ ಬದಲಾವಣೆಯ ಹೊಸ ಆಶಾಭಾವ ಮೂಡಿಸಲಾಗುವುದು ಎಂದರು.
ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸೂರಜ ನಾಯ್ಕ ಸೋನಿ ಮಾತನಾಡಿ, ಪಕ್ಷ ಸಂಘಟನೆಯ ಬಗ್ಗೆ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಅಗತ್ಯ ಸಲಹೆ ಸೂಚನೆ ನೀಡಿದ್ದಾರೆ. ಮುಂದಿನ ತಿಂಗಳು ಪಕ್ಷದಿಂದ ಪಂಚರತ್ನ ಕಾರ್ಯಕ್ರಮ ಆರಂಭವಾಗಲಿದೆ. ರಾಜ್ಯದ ಎಲ್ಲ ಜಿಲ್ಲೆಗಳಿಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಭೇಟಿ ನೀಡಲಿದ್ದಾರೆ. ನಮ್ಮ ಜಿಲ್ಲೆಗೂ ಆಗಮಿಸಲಿದ್ದಾರೆ ಎಂದರು.
ಯಲ್ಲಾಪುರ-ಮುಂಡಗೋಡ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ನಾಗೇಶ ನಾಯ್ಕ ಮಾತನಾಡಿ, ಪಕ್ಷದ ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಕುಮಾರಸ್ವಾಮಿ ಅವರು ಸ್ಪಷ್ಟ ಸಂದೇಶ ನೀಡಿದ್ದಾರೆ. ಪಂಚರತ್ನ ಕಾರ್ಯಕ್ರಮ ಆರಂಭವಾದ ಮೇಲೆ ಅವರು ನೂರು ದಿನಗಳು ಪ್ರವಾಸದಲ್ಲಿರುತ್ತಾರೆ. ಗ್ರಾಮೀಣ ಭಾಗದಲ್ಲಿ ಜನರನ್ನು ಭೇಟಿ ಮಾಡುವುದು, ಗ್ರಾಮ ವಾಸ್ತವ್ಯ ಸೇರಿದಂತೆ ಸಭೆ, ಸಮಾರಂಭಗಳ ಮೂಲಕ ಮತ್ತೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದರೆ ಏನೆಲ್ಲ ಯೋಜನೆಗಳನ್ನು ನೀಡಲಿದ್ದಾರೆ ಎಂಬ ಮಾಹಿತಿಯನ್ನು ನೀಡುವ ಜೊತೆಗೆ ಹಿಂದೆ ಅವರು ನೀಡಿದ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ನೀಡುವ ಮೂಲಕ ಜನರ ವಿಶ್ವಾಸ ಗಳಿಸಿದ್ದಾರೆ. ಅವರು ನುಡಿದಂತೆ ನಡೆದುಕೊಳ್ಳುವ ಬದ್ಧತೆ, ಕ್ರೀಯಾಶೀಲತೆ ಅವರಲ್ಲಿದೆ. ಹಿಂದೆ ನಮ್ಮ ಸರ್ಕಾರ ಇದ್ದಾಗ ನೀಡಿದ ಯೋಜನೆಗಳನ್ನು ಜನಸಾಮಾನ್ಯರಿಗೆ ತಿಳಿಸುವ ಕಾರ್ಯವನ್ನು ನಾವು ಮಾಡುತ್ತೇವೆ ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ಕುಮಟಾ ತಾಲೂಕು ಅಧ್ಯಕ್ಷ ಸಿ.ಜಿ.ಹೆಗಡೆ, ಜಿಲ್ಲಾ ಉಪಾಧ್ಯಕ್ಷ ಪಿ.ಟಿ.ನಾಯ್ಕ, ಮೂರೂರ ಗ್ರಾ.ಪಂ ಅಧ್ಯಕ್ಷ ರಾಘವೇಂದ್ರ ನಾಯ್ಕ, ಪ್ರಮುಖರಾದ ಜಿ.ಕೆ.ಪಟಗಾರ, ಬಲೀಂದ್ರ ಗೌಡ, ಸತೀಶ ಮಹಾಲೆ, ಚಿನ್ನು ಅಂಬಿಗ ಮಿರ್ಜಾನ್, ಮಹೇಂದ್ರ ನಾಯ್ಕ ಇತರರು ಇದ್ದರು.

300x250 AD
Share This
300x250 AD
300x250 AD
300x250 AD
Back to top