• Slide
    Slide
    Slide
    previous arrow
    next arrow
  • ಎಲ್ಲಾ ಪ್ರಶಸ್ತಿಗಳನ್ನು ಒಂದೇ ವೇದಿಕೆಯಡಿ ತರಲು ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್

    300x250 AD

    ನವದೆಹಲಿ: ಕೇಂದ್ರ ಸರ್ಕಾರವು ಸರ್ಕಾರದ ವಿವಿಧ ಸಚಿವಾಲಯಗಳು, ಇಲಾಖೆಗಳು ಮತ್ತು ಏಜೆನ್ಸಿಗಳ ಎಲ್ಲಾ ಪ್ರಶಸ್ತಿಗಳನ್ನು ಒಂದೇ ವೇದಿಕೆಯಡಿಯಲ್ಲಿ ತರಲು ರಾಷ್ಟ್ರೀಯ ಪುರಸ್ಕಾರ್ ಪೋರ್ಟಲ್ ಅನ್ನು ಪ್ರಾರಂಭಿಸಿದೆ. ಪಾರದರ್ಶಕತೆ ಮತ್ತು ಸಾರ್ವಜನಿಕ ಸಹಭಾಗಿತ್ವವನ್ನು ಖಚಿತಪಡಿಸಿಕೊಳ್ಳಲು ಇದನ್ನು ವಿನ್ಯಾಸಪಡಿಸಲಾಗಿದೆ.

    ಈ ಸಾಮಾನ್ಯ ಪೋರ್ಟಲ್ ಪ್ರತಿ ನಾಗರಿಕ ಅಥವಾ ಸಂಸ್ಥೆಗೆ ವ್ಯಕ್ತಿಗಳು ಅಥವಾ ಸಂಸ್ಥೆಗಳನ್ನು ಸರ್ಕಾರದಿಂದ ಸ್ಥಾಪಿಸಲಾದ ವಿವಿಧ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮಾಡಲು ಅನುಕೂಲ ಮಾಡಿಕೊಡುತ್ತದೆ ಎಂದು ಗೃಹ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

    ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು ಅಥವಾ ಶಿಫಾರಸುಗಳು ಮುಂದಿನ ತಿಂಗಳ 15 ರವರೆಗೆ ತೆರೆದಿರುತ್ತವೆ ಮತ್ತು ಜೀವನ್ ರಕ್ಷಾ ಪದಕಕ್ಕಾಗಿ ನಾಮನಿರ್ದೇಶನಗಳು ಅಥವಾ ಶಿಫಾರಸುಗಳನ್ನು ಮುಂದಿನ ತಿಂಗಳ 30 ರವರೆಗೆ ಆಹ್ವಾನಿಸಲಾಗುತ್ತದೆ ಎಂದು ಅದು ತಿಳಿಸಿದೆ.

    ವ್ಯಕ್ತಿಗಳು ಮತ್ತು ಸಂಸ್ಥೆಗಳು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ WWW.AWARDS GOV.IN ಗೆ ಭೇಟಿ ನೀಡಿ, ಸರ್ಕಾರದಿಂದ ಸ್ಥಾಪಿಸಲಾದ ವಿವಿಧ ಪ್ರಶಸ್ತಿಗಳಿಗೆ ತಮ್ಮ ನಾಮನಿರ್ದೇಶನಗಳು ಅಥವಾ ಶಿಫಾರಸುಗಳನ್ನು ಮಾಡಬಹುದಾಗಿದೆ.

    300x250 AD

    ಕೃಪೆ: news13.in

    Share This
    300x250 AD
    300x250 AD
    300x250 AD
    Leaderboard Ad
    Back to top