• Slide
    Slide
    Slide
    previous arrow
    next arrow
  • ವಿವಿಧ ಪ್ರದೇಶಗಳಿಗೆ ಪೌರಾಯುಕ್ತ ಭೇಟಿ: ಪರಿಶೀಲನೆ

    300x250 AD

    ದಾಂಡೇಲಿ: ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಸ್ವಚ್ಛತೆ ಹಾಗೂ ಇನ್ನಿತರ ಸಮಸ್ಯೆಗಳ ಬಗ್ಗೆ ನಗರ ಸಭೆಯ ಪೌರಾಯುಕ್ತರಾದ ಆರ್.ಎಸ್.ಪವಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ನಗರದ ಸೋಮಾನಿ ವೃತ್ತ, ಸಂಡೆ ಮಾರ್ಕೆಟ್, ಬರ್ಚಿ ರಸ್ತೆ, ಕೆ.ಸಿ.ವೃತ್ತ, ಪಟೇಲ್ ವೃತ್ತ ಮೊದಲಾದ ಕಡೆಗಳಿಗೆ ಭೇಟಿ ನೀಡಿ ಸ್ಥಳೀಯವಾಗಿರುವ ಸ್ವಚ್ಚತೆ, ಬೀದಿ ದೀಪಗಳ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿದರು.

    300x250 AD

    ಈ ಸಂದರ್ಭದಲ್ಲಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಮೌಲಾಲಿ ಮುಲ್ಲಾ, ಆರೋಗ್ಯ ನಿರೀಕ್ಷಕ ವಿಲಾಸ್, ಬೀದಿದೀಪ ನಿರ್ವಹಣಾ ವಿಭಾಗದ ಸಲೀಂ ಮೊದಲಾದವರು ಉಪಸ್ಥಿತರಿದ್ದರು. ಬರ್ಚಿ ರಸ್ತೆಯಲ್ಲಿ ಸ್ವಚ್ಛತಾ ಕೆಲಸ ನಿರ್ವಹಿಸುತ್ತಿದ್ದ ಪೌರಕಾರ್ಮಿಕರಲ್ಲಿ ಪೌರಾಯುಕ್ತ ಆರ್.ಎಸ್.ಪವಾರ್ ಅವರು ಆತ್ಮೀಯವಾಗಿ ಮಾತನಾಡಿಸಿ, ಅವರ ಯೋಗಕ್ಷೇಮದ ಬಗ್ಗೆ ಕೇಳಿಕೊಂಡು ಅವರ ಕಾರ್ಯಕ್ಕೆ ಗೌರವ ಸಲ್ಲಿಸಿ ಮಾತನಾಡಿದ್ದು ವಿಶೇಷವಾಗಿತ್ತು.

    Share This
    300x250 AD
    300x250 AD
    300x250 AD
    Leaderboard Ad
    Back to top