ಕಾರವಾರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಪರಿವೀಕ್ಷಣಾಧಿನಿಯಮದ ಪರಿವೀಕ್ಷಣಾಧಿಕಾರಿಯಾಗಿ ಮಂಜುನಾಥ ನಾಯಕ ಅಧಿಕಾರ ಸ್ವೀಕರಿಸಿದ್ದಾರೆ.
ಈ ಹಿಂದೆ ಕಾರವಾರ ಹಾಗೂ ಯಲ್ಲಾಪುರ ತಾಲೂಕಿನಲ್ಲಿ ಮಂಜುನಾಥ ನಾಯಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ್ದು ಸದ್ಯ ಅಂಕೋಲಾ ತಾಲೂಕಿಗೆ ವರ್ಗಾವಣೆಯಾದ ಹಿನ್ನಲೆಯಲ್ಲಿ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ.