ಯಲ್ಲಾಪುರ:ತಾಲೂಕಿನ ಅರಬೈಲ್ ಸಮೀಪದ ಫಣಸಗುಳಿ ಬಳಿ ಸೇತುವೆಯ ಮೇಲಿನಿಂದ ನದಿಗೆ ಬಿದ್ದ ಲಾರಿಯನ್ನು ಮೇಲಕ್ಕೆತ್ತಲಾಗಿದೆ.
ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದು, ಆ ಸಂದರ್ಭದಲ್ಲಿ ಲಾರಿ ಮೇಲಕ್ಕೆತ್ತುವ ಕಾರ್ಯಾಚರಣೆ ನಡೆಸಲಾಯಿತು. ಗ್ರಾಮಸ್ಥರ ನೆರವಿನೊಂದಿಗೆ ಜೆಸಿಬಿ, ಕ್ರೇನ್ ಮೂಲಕ ಲಾರಿಯನ್ನು ಮೇಲಕ್ಕೆತ್ತಲಾಯಿತು.
ಲಾರಿ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಲಾರಿಯಲ್ಲಿ ಸಿಲುಕಿದ್ದಾನೆಂದು ಹೇಳಲಾದ ವ್ಯಕ್ತಿ ಪತ್ತೆಯಾಗಿಲ್ಲ. ನೀರಿನ ರಭಸಕ್ಕೆ ಕೊಚ್ಚಿ ಹೋಗಿರಬಹುದೆಂದು ಹೇಳಲಾಗುತ್ತಿದೆ.