• first
  second
  third
  previous arrow
  next arrow
 • ವಿಶ್ವಸಂಸ್ಥೆ ಭದ್ರತಾ ಮಂಡಳಿ ಅಧ್ಯಕ್ಷರಾಗಿ ಪ್ರಧಾನಿ ಮೋದಿ ಸಾಧ್ಯತೆ

  300x250 AD

  ನವದೆಹಲಿ: ಆಗಸ್ಟ್ 9 ರಂದು ನಡೆಯಲಿರುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮೊದಲ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಿ ಮೋದಿ ವಹಿಸುವ ಸಾಧ್ಯತೆ ಇದೆ ಎಂದು ಯುನೈಟೆಡ್ ನೇಶನ್ ಸೆಕ್ಯುರಿಟಿ ಕೌನ್ಸಿಲ್‍ನ ಶಾಶ್ವತ ಪ್ರತಿನಿಧಿ ಸಯ್ಯದ್ ಅಕ್ಬರುದ್ದೀನ್ ಟ್ವೀಟ್ ಮಾಡಿದ್ದಾರೆ.

  ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇದೇ ಮೊದಲ ಬಾರಿಗೆ ಎಂಬಂತೆ ಭಾರತದ ಪ್ರಧಾನಿಯೋರ್ವರು ವಹಿಸಿಕೊಳ್ಳುತ್ತಿದ್ದಾರೆ. ಇದು ದೇಶದ ನಾಯಕತ್ವ ಗಟ್ಟಿಯಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾರೆ.

  300x250 AD

  ಈ ಸಭೆಯಲ್ಲಿ ಭಾರತ ಕರಾವಳಿ ಭದ್ರತೆ, ಭಯೋತ್ಪಾದನೆ ನಿಗ್ರಹ, ಶಾಂತಿ ಪಾಲನೆ ಎಂಬ ಮೂರು ಮುಖ್ಯ ವಿಚಾರಗಳಿಗೆ ಸಂಬಂಧಿಸಿದಂತೆ ತನ್ನ ನಿಲುವು ಮಂಡಿಸಲಿದೆ. ಈ ಸಭೆಯಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್, ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶೃಂಗ್ಲಾ ಮೊದಲಾದವರು ಭಾಗವಹಿಸಲಿದ್ದಾರೆ.
  ನ್ಯೂಸ್ 13

  Share This
  300x250 AD
  300x250 AD
  300x250 AD
  Back to top