Slide
Slide
Slide
previous arrow
next arrow

ಸೆ.2 ರಿಂದ ವಿವಿಧ ತರಬೇತಿ ಕಾರ್ಯಕ್ರಮ

300x250 AD

ಕುಮಟಾ: ಇಲ್ಲಿನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ- ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಎಲ್‌ಇಡಿ, ಎಲ್‌ಸಿಡಿ ಟಿ.ವಿ ಮತ್ತು ಇತರೆ ತಾಂತ್ರಿಕ ಉಪಕರಣಗಳ ದುರಸ್ತಿ ಹಾಗೂ ಎಲ್ಲಾ ಕಂಪನಿಯ ದ್ವಿಚಕ್ರ ವಾಹನ ದುರಸ್ತಿ ತರಬೇತಿಯು ಸೆ.02ರಿಂದ 30ರವರೆಗೆ ನಡೆಯಲಿದೆ.
ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ- ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ವಯೋಮಿತಿ 18ರಿಂದ 45 ವರ್ಷಗಳು. ಹಾಗೂ ಕನಿಷ್ಟ ವಿದ್ಯಾರ್ಹತೆ ಕನ್ನಡ ಓದಲು ಬರೆಯಲು ಬರಬೇಕು ಮತ್ತು ತರಬೇತಿಗೆ ಅನುಗುಣವಾಗಿ ಕನಿಷ್ಠ ಜ್ಞಾನವಿರಬೇಕು.
ಆಸಕ್ತರು ನೇರವಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ- ಉದ್ಯೋಗ ತರಬೇತಿ ಸಂಸ್ಥೆ, ಕೈಗಾರಿಕಾ ವಸಾಹತು ಪ್ರದೇಶ, ಹೆಗಡೆ ರಸ್ತೆ, ಕುಮಟಾ- 581 343 ಇವರಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಲ್ಲದೇ ಮೊಬೈಲ್ ಸಂಖ್ಯೆ: 9449860007, 9538281989, 9916783825, 8880444612, 962092004 ಕ್ಕೆ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.
ಗ್ರಾಮೀಣ ಪ್ರದೇಶದ ಬಿಪಿಎಲ್ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತರು ತರಬೇತಿಗೆ ಬರುವಾಗ 4 ಪಾಸ್‌ಪೋರ್ಟ್ ಸೈಜ್ ಫೋಟೋ, ರೇಶನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್‌ಗಳ 1 ಝೆರಾಕ್ಸ್ ಪ್ರತಿಯನ್ನು ತರಬೇಕು. ಈ ತರಬೇತಿಯ ಸದುಪಯೋಗವನ್ನು ಪಡೆದುಕೊಂಡು ಉದ್ಯೋಗ ಕೈಗೊಳ್ಳಬೇಕೆಂದು ಕೋರಲಾಗಿದೆ.

300x250 AD
Share This
300x250 AD
300x250 AD
300x250 AD
Back to top