ಕುಮಟಾ: ಇತ್ತೀಚೆಗೆ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಬಾಡ ಸರಕಾರಿ ಪದವಿಪೂರ್ವ ಕಾಲೇಜು ಆಶ್ರಯದಲ್ಲಿ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳ ಕ್ರೀಡಾಕೂಟ ಕಡ್ಲೆ ಗಾಂಧಿವನ ಕ್ರೀಡಾಂಗಣದಲ್ಲಿ ನಡೆಯಿತು.
ಹಿರೇಗುತ್ತಿ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಖೋಖೋ ಆಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗೆಯೇ ಚರಣ ಮಡಿವಾಳ 800 ಮೀ. ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಅಲ್ಲದೆ ಭುವನ ನಾಯ್ಕ ಸರಪಳಿಗುಂಡು ಎಸೆತ ಮತ್ತು ಗುಂಡು ಎಸೆತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಬೀರಣ್ಣ ಗೌಡ 1500 ಮೀ ಓಟ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಚರಣ ಮಡಿವಾಳ 100 ಮೀ. ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ, ಚಾರು ಗೌಡ 800 ಮೀ. ಓಟದ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಿಕ್ಷಕರ ಸಂಘದ ತಾಲೂಕಾ ಅಧ್ಯಕ್ಷ ರವೀಂದ್ರ ಭಟ್ಟ ಸೂರಿ ಬಹುಮಾನ ವಿತರಿಸಿದರು.
ಗ್ರಾಮೀಣ ಭಾಗದ ಈ ಕಾಲೇಜಿನ ವಿದ್ಯಾರ್ಥಿಗಳ ಸಾಧನೆಗೆ ಕಾಲೇಜು ಅಭಿವೃದ್ಧಿ ಅಧ್ಯಕ್ಷರು, ಶಾಸಕರೂ ಆದ ದಿನಕರ ಕೆ.ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿಯ ಎಲ್ಲಾ ಸದಸ್ಯರುಗಳು, ಪ್ರಭಾರಿ ಪ್ರಾಚಾರ್ಯರಾಗಿರುವ ಅರುಣ ಎನ್.ಹೆಗಡೆ ಹಾಗೂ ಎಲ್ಲಾ ಉಪನ್ಯಾಸಕರು ಮತ್ತು ಊರ ನಾಗರಿಕರು ಅಭಿನಂದನೆ ಸಲ್ಲಿಸಿದ್ದಾರೆ.