Slide
Slide
Slide
previous arrow
next arrow

ಡೈಮಂಡ್ ಲೀಗ್ ಮೀಟ್ ಟೈಟಲ್ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್‌ ಛೋಪ್ರಾ

300x250 AD

ನವದೆಹಲಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದು ಭಾರತಕ್ಕೆ ಹೆಮ್ಮೆ ತಂದಿರುವ ಜಾವಲಿನ್‌ ಪಟು ನೀರಜ್ ಚೋಪ್ರಾ ಅವರು ಮತ್ತೆ ಇತಿಹಾಸ ನಿರ್ಮಾಣ ಮಾಡಿದ್ದಾರೆ. ಲೊಸನ್ನೆ ಡೈಮಂಡ್ ಲೀಗ್‌ನಲ್ಲಿ ಜಾವೆಲಿನ್ ಥ್ರೋ ಸ್ಪರ್ಧೆಯನ್ನು 89.08 ಮೀಟರ್‌ಗಳ ಅತ್ಯುತ್ತಮ ಎಸೆತದೊಂದಿಗೆ ಗೆದ್ದಿದ್ದಾರೆ. ‌

ನೀರಜ್ ಛೋಪ್ರಾ ಅವರು ಪ್ರತಿಷ್ಠಿತ ಡೈಮಂಡ್ ಲೀಗ್ ಮೀಟ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯರಾಗಿದ್ದಾರೆ.

ಈ ಮೂಲಕ ನೀರಜ್ ಅವರು ಸೆಪ್ಟೆಂಬರ್ 7 ಮತ್ತು 8 ರಿಂದ ಸ್ವಿಟ್ಜರ್ಲೆಂಡ್‌ನ ಜ್ಯೂರಿಚ್‌ನಲ್ಲಿ ನಡೆಯಲಿರುವ ಡೈಮಂಡ್ ಲೀಗ್ ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ಅಲ್ಲದೇ 2023 ರ ವಿಶ್ವ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದಿದ್ದಾರೆ.

300x250 AD

ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು, ಜಾವೆಲಿನ್ ಆಟಗಾರ ನೀರಜ್ ಚೋಪ್ರಾ ಅವರಿಗೆ ಡೈಮಂಡ್ ಲೀಗ್ ಮೀಟ್ ಗೆದ್ದ ಮೊದಲನೇ ಭಾರತೀಯ ಎಂಬ ಹೆಗ್ಗಳಿಕೆಗಾಗಿ ಅಭಿನಂದನೆ ಸಲ್ಲಿಸಿದ್ದಾರೆ.  89.08 ಮೀಟರ್ ಎಸೆದು ಸ್ವಿಟ್ಜರ್ಲೆಂಡ್‌ನ ಲೌಸನ್ನೆಯಲ್ಲಿ ಅಗ್ರ ಸ್ಥಾನ ಪಡೆದು ಸಾಧನೆ ಮಾಡಿದ್ದಕ್ಕಾಗಿ ಶ್ಲಾಘಿಸಿದ್ದಾರೆ.

ಕೃಪೆ:http://news13.in

Share This
300x250 AD
300x250 AD
300x250 AD
Back to top