ಮುಂಡಗೋಡ: ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಸೀನಿಯರ್ ಅಥ್ಲೆಟಿಕ್ ಚಾಂಪಿಯನ್ ಶಿಪ್’ನಲ್ಲಿ 200 ಮೀ. ಓಟದ ಸ್ಪರ್ಧೆಯಲ್ಲಿ ತಾಲೂಕಿನ ಚಳಗೇರಿ ಗ್ರಾಮದ ಕು.ನಯನಾ ಕೊಕರೆ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ.ಈಕೆಯ ಈ ಸಾಧನೆಯ ಗ್ರಾಮಸ್ಥರು, ಪಾಲಕರು ಹರ್ಷ ವ್ಯಕ್ತಪಡಿಸಿ ಶುಭಹಾರೈಸಿದ್ದಾರೆ.
ಕುಮಾರಿ.ನಯನಾ ಕೊಕರೆ ಅವರು ಅಥ್ಲೆಟಿಕ್ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡುವ ಮೂಲಕವಾಗಿ ತಮ್ಮೂರಿನ ಹಾಗೂ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಲಿ ಮುಂದಿನ ಕ್ರೀಡಾ ಭವಿಷ್ಯಯು ಉಜ್ವಲವಾಗಿರಲಿ ಎಂದು ಕಾರ್ಮಿಕ ಖಾತೆ ಸಚಿವ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಆಶೀರ್ವಾದಪೂರ್ವಕವಾಗಿ ಅಭಿನಂದಿಸಿದ್ದಾರೆ.
ಅಥ್ಲೆಟಿಕ್ ಚಾಂಪಿಯನ್ ಶಿಪ್:200 ಮೀ. ಓಟದ ಲ್ಲಿ ನಯನ ಕೊಕರೆ ಪ್ರಥಮ
