Slide
Slide
Slide
previous arrow
next arrow

ಕಾರುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಗಾಯ

300x250 AD

ಯಲ್ಲಾಪುರ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಉಂಟಾದ ಘಟನೆ ಪಟ್ಟಣದ ಬಿಸಗೋಡ ಕ್ರಾಸ್ ಬಳಿ ನಡೆದಿದೆ.  

ಅಂಕೋಲಾದ ಆರ್.ಎಸ್.ಎಸ್ ಮುಖಂಡ ಮಂಗೇಶ ಬೆಂಡೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಯಲ್ಲಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಂಗೇಶ ಅವರು ಹುಬ್ಬಳ್ಳಿಯಿಂದ ಅಂಕೋಲಾ ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಅವರ ಕಾರು ಹಾಗೂ ಎದುರಿನಿಂದ ಬಂದ ಕಾರಿನ ನಡುವೆ ಬಿಸಗೋಡ ಕ್ರಾಸ್ ಬಳಿ ಮುಖಾಮುಖಿ ಡಿಕ್ಕಿಯಾಗಿದೆ. ಎರಡೂ ಕಾರುಗಳು ಜಖಂಗೊಂಡಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

300x250 AD

ಮಂಗೇಶ್ ಬೆಂಡೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಚಾರಕರು, ಪ್ರಸ್ತುತ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ್ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.

Share This
300x250 AD
300x250 AD
300x250 AD
Back to top