Slide
Slide
Slide
previous arrow
next arrow

‘ಪುನೀತ ಉಪಗ್ರಹ’ ಉಡಾವಣೆ ವೀಕ್ಷಣೆಗೆ ಅವಕಾಶ

300x250 AD

ಕಾರವಾರ: 75ನೇ ಸ್ವಾತಂತ್ರ‍್ಯೋತ್ಸವದ ಸುಸಂದರ್ಭದಲ್ಲಿ, ದೇಶಾದ್ಯಂತ ವಿದ್ಯಾರ್ಥಿಗಳು ತಯಾರಿಸಿರುವ 75 ಉಪಗ್ರಹಗಳನ್ನು ಉಡಾವಣೆ ಮಾಡಲಾಗುತ್ತಿದ್ದು, ಕರ್ನಾಟಕದಲ್ಲಿ ಕರ್ನಾಟಕ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಉಪಗ್ರಹ-ಕೆಜಿಎಸ್ 3 ಸ್ಯಾಟ್ ಯೋಜನೆಯಲ್ಲಿ ನಿರ್ಮಾಣಗೊಳ್ಳುವ ಉಪಗ್ರಹವನ್ನು ಪುನೀತ ಉಪಗ್ರಹ ಎಂದು ನಾಮಕರಣ ಮಾಡಲಾಗಿದೆ.
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ಮತ್ತು ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಸಹಯೋಗದೊಂದಿಗೆ ಭಾರತೀಯ ಉಪಗ್ರಹ ಸಂಶೋಧನಾ ಸಂಸ್ಥೆ ಮತ್ತು ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್ ಅಸೋಸಿಯೇಷನ್ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದೆ.
ಪುನೀತ ಉಪಗ್ರಹ ಉಡಾವಣೆಯ ವಿದ್ಯಾರ್ಥಿ ಕೇಂದ್ರಿತ ಕಾರ್ಯಕ್ರಮಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳು, ಶ್ರೀಹರಿಕೋಟಾದಲ್ಲಿ ಉಪಗ್ರಹ ಉಡಾವಣೆಯನ್ನು ವೀಕ್ಷಿಸುವ ಅವಕಾಶವನ್ನು ಪಡೆಯಲಿದ್ದಾರೆ. ಈ ಅವಕಾಶವನ್ನು ಪಡೆಯಲು ನೋಂದಾಯಿಸಿಕೊಂಡು ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನೋಂದಾವಣೆ ವಿಧಾನ: 8ರಿಂದ 10ನೇ ತರಗತಿಯಲ್ಲಿರುವ ಪ್ರೌಢಶಾಲಾ ವಿದ್ಯಾರ್ಥಿಗಳು ಆನ್‌ಲೈನ್ ರಸಪ್ರಶ್ನೆ ಸ್ಪರ್ಧೆ, ವಿಜ್ಞಾನ ಚಿತ್ರಕಲಾ ಸ್ಪರ್ಧೆಗಳಲ್ಲಿ ಭಾಗವಹಿಸಲು https://forms.gle/GaSmj3ieeggWYRKH6 ನಲ್ಲಿ ನೋಂದಾಯಿಸಿಕೊಳ್ಳಬೇಕು.
11 ಮತ್ತು 12ನೇ ತರಗತಿಯ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ಪ್ರಬಂಧ ಸ್ಪರ್ಧೆ, ಖಗೋಳಶಾಸ್ತ್ರದ ಕುರಿತು ಪೋಸ್ಟರ್ ಪ್ರಸ್ತುತಿ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು https://forms.gle/x4zWiqVXofZ9QBD97 ನಲ್ಲಿ ನೋಂದಾಯಿಸಿಕೊಳ್ಳಬಹುದು. ನೋಂದಾವಣೆಗೆ ಸೆ.10 ಕೊನೆಯ ದಿನವಾಗಿದೆ.

300x250 AD
Share This
300x250 AD
300x250 AD
300x250 AD
Back to top