Slide
Slide
Slide
previous arrow
next arrow

‘ಅತ್ಯುತ್ತಮ ಶ್ರೀ ಗಣೇಶೋತ್ಸವ ಸಮಿತಿ ಪ್ರಶಸ್ತಿ’, ‘ಉತ್ತಮ ಸ್ವಯಂ ಸೇವಕ ಪ್ರಶಸ್ತಿ’

300x250 AD

ಶಿರಸಿ: ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಶಿರಸಿ ಪೊಲೀಸ್ ವೃತ್ತ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಪಾಲನೆಗೆ ಸಹಕಾರಿಯಾಗುವಂತೆ ಹಾಗೂ ಪರಿಸರ ಸ್ನೇಹಿಯಾಗಿ ಹಬ್ಬ ಆಚರಿಸುವ ಉತ್ತಮ ಗಣೇಶೋತ್ಸವ ಸಮಿತಿಯವರಿಗೆ 2022 ನೇ ಸಾಲಿನ ಅತ್ಯುತ್ತಮ ಶ್ರೀ ಗಣೇಶೋತ್ಸವ ಸಮಿತಿ ಪ್ರಶಸ್ತಿಯ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ನೀಡಲಾಗುತ್ತದೆ.‌

ಹಬ್ಬದ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಸಂಚಾರ ಸುವ್ಯವಸ್ಥೆ ಪಾಲನೆಗೆ ಸಹಕಾರಿಯಾಗಿ ಉತ್ತಮ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸುವವರಿಗೆ ಉತ್ತಮ ಸ್ವಯಂ ಸೇವಕ ಪ್ರಶಸ್ತಿ ನೀಡಲಾಗುತ್ತದೆ, ಹಾಗೂ ನಮ್ಮ ಶಿರಸಿ ಇತರರಿಗೆ ಮಾದರಿಯಾಗುವಂತೆ ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಅಚ್ಚುಕಟ್ಟಾಗಿ ಶಾಂತಿ ಸೌಹಾರ್ದತೆಯಿಂದ ಆಚರಣೆಯಾಗುವಲ್ಲಿ ಸಹಕರಿಸುವಂತೆ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

300x250 AD
Share This
300x250 AD
300x250 AD
300x250 AD
Back to top