
ಕಾರವಾರ: ಜಿಲ್ಲೆಯ ಪ್ರವಾಹ ಪರಿಸ್ಥಿತಿ ಪರಿಶೀಲನೆಗೆ ಬಂದ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಕಾರವಾರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸರ್ಕಾರ ಬಿದ್ದರೆ ನಾವು ಚುನಾವಣೆ ಎದುರಿಸಲು ಸಿದ್ದರಿದ್ದೇವೆ ಎಂದು ಹೇಳಿದರು.
ಬೆಳಗ್ಗಿನ ಸಮಯದಲ್ಲಿ ಠ್ಯಾಗೋರ್ ಕಡಲ ತೀರದಲ್ಲಿ ವಾಕಿಂಗ್ ಮಾಡುತ್ತಿದ್ದ ಸಮಯದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಈಗಿನ ಆಡಳಿತ ಸರ್ಕಾರ ಪೂಣಾವಧಿಯವರೆಗೆ ಇರುತ್ತದೆ ಎಂದು ಭಾವಿಸಿದ್ದೇನೆ. ಆದರೆ ಅವರದೇ ಆದ ತಪ್ಪುಗಳಿಂದ ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಕಳೆದುಕೊಂಡರೆ, ನಾವು ಚುನಾವಣೆಗೆ ತಯಾರಿದ್ದೇವೆ. ‘ಕಳ್ಳನ ಮನಸ್ಸು ಹಳ್ಳುಳಗೆ ಎಂಬಂತೆ, ತಪ್ಪು ಕೆಲಸ ಮಾಡಿ ಹೆಗಲು ಮುಟ್ಟಿ ನೋಡಿಕೊಳ್ಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಪಕ್ಷದ ಮೇಲೆ ವಾಗ್ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸತೀಶ ಸೈಲ್, ಕಾಂಗ್ರೆಸ್ ಜಿಲ್ಲಾ ವಕ್ತಾರ ಶಂಭು ಶೆಟ್ಟಿ ಮುಂತಾದವರು ಅವರೊಟ್ಟಿಗಿದ್ದರು.