• Slide
    Slide
    Slide
    previous arrow
    next arrow
  • ‘ಪುಣ್ಯಕೋಟಿ ದತ್ತು ಯೋಜನೆ’ಗೆ ನಟ ಸುದೀಪ್‌ ರಾಯಭಾರಿ

    300x250 AD

    ಬೆಂಗಳೂರು: ಕರ್ನಾಟಕ ಸರಕಾರವು ತನ್ನ ಮಹತ್ವಾಕಾಂಕ್ಷೆಯ ‘ಪುಣ್ಯಕೋಟಿ ದತ್ತು ಯೋಜನೆ’ಗೆ ಚಲನಚಿತ್ರ ನಟ ಕಿಚ್ಚ ಸುದೀಪ್ ಅವರನ್ನು ರಾಯಭಾರಿಯಾಗಿ ನೇಮಕ ಮಾಡಿದೆ.

    ಪಶು ಸಂಗೋಪನೆ ಇಲಾಖೆಯು ಜಾನುವಾರುಗಳ ರಕ್ಷಣೆಗಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚಾರಪಡಿಸಿ, ಹೈನುಗಾರಿಕೆಗೆ ಉತ್ತೇಜನವನ್ನು ನೀಡಿ, ಜಾನುವಾರುಗಳ ಸಂರಕ್ಷಣೆ, ಪಾಲನೆ ಪೋಷಣೆ ಮಾಡುತ್ತಿರುವ ಸರ್ಕಾರದೊಂದಿಗೆ ಕೈಜೋಡಿಸಿ, ಸಾರ್ವಜನಿಕರಲ್ಲಿ ಸ್ಪೂರ್ತಿ ತುಂಬಲು ಸುದೀಪ್ ಅವರನ್ನು ಪುಣ್ಯಕೋಟಿ ದತ್ತು ಯೋಜನೆಗೆ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಪಶು ಸಂಗೋಪಣಾ ಸಚಿವ ಪ್ರಭು ಚವ್ಹಾಣ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    ಗೋ ಸಂತತಿಯನ್ನು ಕಾಪಾಡುವ ನಿಟ್ಟಿನಲ್ಲಿ ಗೋಶಾಲೆಗಳಲ್ಲಿನ ಗೋವುಗಳನ್ನು ದತ್ತು ಪಡೆಯಲು ಪ್ರೋತ್ಸಾಹಿಸುವ ಸಲುವಾಗಿ ಮೊದಲ ಬಾರಿಗೆ ಪುಣ್ಯಕೋಟಿ ದತ್ತು ಯೋಜನೆಗೆ ಚಾಲನೆ ನೀಡಲಾಗಿದೆ.

    300x250 AD

    https://twitter.com/AshwiniMS_TNIE/status/1565595520097460224/photo/1?ref_src=twsrc%5Etfw%7Ctwcamp%5Etweetembed%7Ctwterm%5E1565595520097460224%7Ctwgr%5E69cfa9d95b91e744b8126f5cc897a3f312959ae5%7Ctwcon%5Es1_&ref_url=https%3A%2F%2Fnews13.in%2Farchives%2F216313

    Share This
    300x250 AD
    300x250 AD
    300x250 AD
    Leaderboard Ad
    Back to top