Slide
Slide
Slide
previous arrow
next arrow

ಓಲಂಪಿಕ್ಸ್: ‘ಹಾಕಿ’ಯಲ್ಲಿ ಸಮಿಫೈನಲ್ ಗೆ ಭಾರತದ ವನಿತೆಯರು

300x250 AD

ಟೋಕಿಯೋ: ಒಲಿಂಪಿಕ್ಸ್ ಇತಿಹಾಸದಲ್ಲಿ 41 ವರ್ಷಗಳ ಬಳಿಕ ಎಂಟರಘಟ್ಟಕ್ಕೇರಿರುವ ಭಾರತ ಮಹಿಳಾ ತಂಡ ಇಂದು ನಡೆದ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಮಣಿಸಿದೆ.

ಭಾರತೀಯ ಮಹಿಳಾ ತಂಡವು ಆಸ್ಟ್ರೇಲಿಯಾವನ್ನು 1-0 ಅಂತರದಿಂದ ಸೋಲಿಸಿ ಇತಿಹಾಸದಲ್ಲಿ ಮೊದಲ ಬಾರಿಗೆ ಸೆಮಿಫೈನಲ್ ಪ್ರವೇಶಿಸಿದೆ. ಎ ಗುಂಪಿನಲ್ಲಿ ಹ್ಯಾಟ್ರಿಕ್ ಸೋಲಿನ ನಡುವೆಯೂ ಕಡೇ ಎರಡು ಪಂದ್ಯಗಳಲ್ಲಿ ಉತ್ತಮ ನಿರ್ವಹಣೆ ತೋರಿದ ಭಾರತ ತಂಡ, 6 ಪಾಯಿಂಟ್ಸ್‌ಗಳೊಂದಿಗೆ 4ನೇ ಸ್ಥಾನಿಯಾಗಿ ಕ್ವಾರ್ಟರ್ ಫೈನಲ್ ಪ್ರವೇಶಿಸಿತ್ತು. ಕಡೇ ಎರಡು ಹಣಾಹಣಿಯಲ್ಲಿ ಐರ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ಎದುರು ಜಯ ದಾಖಲಿಸಿತ್ತು. ಮಹಿಳಾ ತಂಡ 1980ರ ಮಾಸ್ಕೋ ಒಲಿಂಪಿಕ್ಸ್‌ನಲ್ಲಿ ಮೊದಲ ಬಾರಿಗೆ ಅರ್ಹತೆ ಗಿಟ್ಟಿಸಿಕೊಂಡಾಗ ಎಂಟರಘಟ್ಟಕ್ಕೇರಿದ ಸಾಧನೆ ಮಾಡಿತ್ತು.

300x250 AD

ವಿಶ್ವ ನಂ.4 ಆಸ್ಟ್ರೇಲಿಯಾ ತಂಡವೇ ಫೆವರಿಟ್ ಎನಿಸಿದರೂ ವಿಶ್ವ ನಂ.10ನೇ ಸ್ಥಾನದಲ್ಲಿರುವ ಭಾರತ, ಅಚ್ಚರಿ ಫಲಿತಾಂಶ ನೀಡಿದೆ. 1980ರ ಮಾಸ್ಕೋ ಒಲಿಂಪಿಕ್ಸ್‌ನಲ್ಲಿ 4ನೇ ಸ್ಥಾನ ಪಡೆದಿರುವುದೇ ಒಲಿಂಪಿಕ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ ತಂಡದ ಶ್ರೇಷ್ಠ ಸಾಧನೆ ಎನಿಸಿದೆ. ಅರ್ಜೆಂಟೀನಾವನ್ನು ಮುಂದಿನ ಸೆಮಿಫೈನಲ್‌ನಲ್ಲಿ ಭಾರತ ಎದುರಿಸಲಿದೆ.

Share This
300x250 AD
300x250 AD
300x250 AD
Back to top