• Slide
    Slide
    Slide
    previous arrow
    next arrow
  • ಶಾಸಕಿ ರೂಪಾಲಿಯಿಂದ ಅಭಿವೃದ್ಧಿಗೊಂಡ ಸದಾಶಿವಗಡ ಔರಾದ್ ರಾಜ್ಯ ಹೆದ್ದಾರಿ ಲೋಕಾರ್ಪಣೆ

    300x250 AD

    ಕಾರವಾರ: ಸರ್ಕಾರದ ವಿಶೇಷ ಅನುದಾನದಲ್ಲಿ ಸದಾಶಿವಗಡ ಔರಾದ್ ರಾಜ್ಯ ಹೆದ್ದಾರಿಯಲ್ಲಿ 2.30 ಕೋಟಿ ರೂ. ವೆಚ್ಚದಲ್ಲಿ ಡಿವೈಡರ್, ಬೀದಿ ದೀಪ ಅಳವಡಿಸಿ, ಅಭಿವೃದ್ಧಿಪಡಿಸಿದ್ದನ್ನು ಅತ್ಯಂತ ಸಂತಸದಿಂದ ಇಂದು ಲೋಕಾರ್ಪಣೆ ಮಾಡಿದ್ದೇನೆ ಎಂದು ಶಾಸಕಿ ರೂಪಾಲಿ ಎಸ್. ನಾಯ್ಕ ಹೇಳಿದರು.
    ತಾಲ್ಲೂಕಿನ ಚಿತ್ತಾಕುಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಔರಾದ ಸದಾಶಿವಗಡ ರಾಜ್ಯ ಹೆದ್ದಾರಿ – 34 ರ ಕಿ.ಮೀ 725.34 ರಲ್ಲಿ ಸುರಕ್ಷತಾ ಕಾಮಗಾರಿ ಹಾಗೂ ಬೀದಿ ದೀಪ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
    ಈ ರಸ್ತೆ ಅಗಲವಾಗಿ ನಿರ್ಮಾಣ ಮಾಡಬೇಕು ಎಂಬುದು ಹಲವು ವರ್ಷದ ಬೇಡಿಕೆಯಾಗಿತ್ತು. ಗ್ರಾಮ ಪಂಚಾಯತಿಯನ್ನೂ ಕೂಡ ಪಟ್ಟಣದಂತೆ ಅಭಿವೃದ್ಧಿ ಮಾಡುವುದು ಅವಶ್ಯಕವಾಗಿದೆ. ಅಭಿವೃದ್ಧಿ ದೃಷ್ಟಿಯಿಂದ ಚಿತ್ತಾಕುಲದ ಚಿತ್ರಣವನ್ನು ಬದಲಾಯಿಸುವುದಾಗಿ ಹೇಳಿದ್ದು, ಅದರಂತೆ ನಾನು ನಡೆದುಕೊಂಡಿದ್ದೇನೆ. ಇನ್ನೂ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನವನ್ನು ಒದಗಿಸಲಾಗಿದೆ ಎಂದರು.
    ಸ್ಥಳೀಯ ಯುವಕರು ಉದ್ಯೋಗಕ್ಕಾಗಿ ಪಕ್ಕದ ರಾಜ್ಯ ಗೋವಾಕ್ಕೆ ಕಡಿಮೆ ಸಂಬಳಕ್ಕೆ ಹೋಗುತ್ತಿದ್ದಾರೆ. ಅದಕ್ಕಾಗಿ ಮುಡಿಗೇರಿಯಲ್ಲಿ ಕೈಗಾರಿಕೆ ಸ್ಥಾಪನೆಗಾಗಿ ನಿರಂತರ ಪ್ರಯತ್ನ ಮಾಡುತ್ತಿದ್ದೇನೆ. ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೈಗಾರಿಕಾ ಸಚಿವರಾದ ಮುರಗೇಶ ನಿರಾಣಿ ಅವರಲ್ಲಿ ನಿರಂತರವಾಗಿ ಪ್ರಯತ್ನಿಸುತ್ತಿದ್ದೇನೆ. ಶೀಘ್ರದಲ್ಲಿ ಕೈಗಾರಿಕೆ ಸ್ಥಾಪನೆಯಾಗುವ ಸಾಧ್ಯತೆ ಇದೆ ಎಂದರು.
    ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಸ್ವಾತಿ ದೇಸಾಯಿ, ಉಪಾಧ್ಯಕ್ಷೆ ರೀನಾ ವೈಂಗಣಕರ, ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷ ಸುಭಾಷ ಗುನಗಿ, ಪಂಚಾಯತಿ ಸರ್ವ ಸದಸ್ಯರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

    ಕೋಟ್…
    ಚಕ್‌ಮಕ್‌ಜಂಗ್ ಹೆಂಜಾ ನಾಯ್ಕ ಅವರ ಹೆಸರಿನಲ್ಲಿ ಸೈನ್ಯಕ್ಕೆ ಸೇರಲು ಬಯಸುವ ಯುವಕರಿಗೆ ತರಬೇತಿ ಕೇಂದ್ರವನ್ನು ಕಾರವಾರದ ಮಾಜಾಳಿಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ತೆರೆಯಲಾಗುತ್ತಿದೆ.
    • ರೂಪಾಲಿ ಎಸ್.ನಾಯ್ಕ, ಶಾಸಕಿ

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top