ಕಾರವಾರ: ಕೇಂದ್ರ ಸರಕಾರದ ಗ್ರಾಮೀಣಾಭಿವೃದ್ಧಿ ಮಂತ್ರಾಲಯ ಹಾಗೂ ಕೆನರಾ ಬ್ಯಾಂಕ್ ಸಹಭಾಗಿತ್ವದಲ್ಲಿ 30 ದಿನಗಳ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ ಮತ್ತು ಕೃಷಿಕರಿಗಾಗಿ 10 ದಿನಗಳ ತರಕಾರಿ ಬೆಳೆಗಳ ನರ್ಸರಿ ಮ್ಯಾನೇಜ್‌ಮೆಂಟ್ ಉಚಿತ ತರಬೇತಿಗಳಿಗೆ ಅರ್ಜಿ ಅಹ್ವಾನಿಸಲಾಗಿದೆ.
ಆಸಕ್ತ ಕೃಷಿಕರು ಹಾಗೂ 18ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ಬಿಪಿಎಲ್ ಕುಟುಂಬದ ಯುವಕರು ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಸ್ವ- ಉದ್ಯೋಗ ತರಬೇತಿ ಸಂಸ್ಥೆಗೆ ಸಂರ್ಕಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂರವಾಣಿ ಸಂಖ್ಯೆ 9483485489, 9482188780, 8951819260, 8197022501, 08284295307 ಗೆ ಸಂಪರ್ಕಿಸಿ ಎಂದು ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯ ನಿರ್ದೇಶಕ ಪ್ರಸನ್ನಕುಮಾರ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನರ್ಸರಿ ಮ್ಯಾನೇಜ್‌ಮೆಂಟ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ
